Galatians 6:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂಥ ವಿಷಯಗಳ ಬಗ್ಗೆ ನಾನು ಹೆಚ್ಚಳಪಡುವುದೇ ಇಲ್ಲ. ನಾನು ಹೆಮ್ಮೆಪಡಲು ನನಗಿರುವ ಒಂದೇ ಕಾರಣವೇನೆಂದರೆ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಶಿಲುಬೆಯೊಂದೇ. ಶಿಲುಬೆಯ ಮೇಲೆ ಯೇಸುವಿಗಾದ ಮರಣದ ಮೂಲಕ ಲೋಕವು ನನ್ನ ಪಾಲಿಗೆ ಸತ್ತುಹೋಯಿತು. ನಾನು ಸಹ ಲೋಕದ ಪಾಲಿಗೆ ಸತ್ತುಹೋದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು.
Kannada BSI Bible 2016
ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ಶಿಲುಬೆಗೆ ಹಾಕಿಸಿಕೊಂಡು ನನ್ನ ಪಾಲಿಗೆ ಸತ್ತಿತು, ನಾನು ಶಿಲುಬೆಗೆ ಹಾಕಿಸಿಕೊಂಡು ಲೋಕದ ಪಾಲಿಗೆ ಸತ್ತೆನು.
Kannada Bible (KNCL) BSI 2016
ನನಗಾದರೋ ನಮ್ಮ ಪ್ರಭು ಯೇಸುಕ್ರಿಸ್ತರ ಶಿಲುಬೆಯನ್ನು ಬಿಟ್ಟು ಬೇರಾವುದರಲ್ಲೂ ಹೆಚ್ಚಳಪಡುವುದು ಬೇಡವೇ ಬೇಡ. ಆ ಶಿಲುಬೆಯ ಮೂಲಕ. ನನ್ನ ಪಾಲಿಗೆ ಲೋಕವೇ ಶಿಲುಬೆಗೆ ಜಡಿಸಿಕೊಂಡು ಸತ್ತಿದೆ; ನಾನೂ ಸಹ ಲೋಕದ ಪಾಲಿಗೆ ಶಿಲುಬೆಗೆ ಜಡಿಸಿಕೊಂಡು ಸತ್ತಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನಗಾದರೋ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಶಿಲುಬೆಯನ್ನು ಬಿಟ್ಟು ಹೆಚ್ಚಳ ಪಡುವುದು ಬೇಡವೇ ಬೇಡ. ಅವರ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.