Galatians 6:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಇನ್ನು ಮೇಲೆ ನನಗೆ ತೊಂದರೆ ಕೊಡಬೇಡಿ. ನನ್ನ ದೇಹದ ಮೇಲೆ ಬಾಸುಂಡೆಯ ಗುರುತುಗಳಿವೆ. ನಾನು ಕ್ರಿಸ್ತನವನೆಂಬುದಕ್ಕೆ ಈ ಗುರುತುಗಳೇ ಸಾಕ್ಷಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನು ಮೇಲೆ ಯಾರೂ ನನಗೆ ತೊಂದರೆಪಡಿಸಬಾರದು, ನನ್ನ ದೇಹದಲ್ಲಿ ಯೇಸುಕ್ರಿಸ್ತನ ಗುರುತುಗಳನ್ನು ಮುದ್ರಿಸಿಕೊಂಡಿದ್ದೇನೆ.
Kannada BSI Bible 2016
ಇನ್ನು ಮೇಲೆ ಯಾರೂ ನನ್ನನ್ನು ಕಳವಳ ಪಡಿಸಬಾರದು; ಯಾಕಂದರೆ ನಾನು ನನ್ನ ದೇಹದಲ್ಲಿ ಕರ್ತನಾದ ಯೇಸುವಿನ ಗುರುತುಗಳನ್ನು ಹೊಂದಿದವ ನಾಗಿದ್ದೇನೆ.ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್‌.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನು ಮೇಲೆ ಯಾರೂ ನನ್ನನ್ನು ತೊಂದರೆಪಡಿಸಬಾರದು, ನನ್ನ ದೇಹದಲ್ಲಿ ಯೇಸುವಿನ ಮುದ್ರೆಗಳು ಹಾಕಿರುತ್ತವಲ್ಲಾ.
Kannada Bible (KNCL) BSI 2016
ಇನ್ನು ಮೇಲೆ ಯಾರೂ ನನಗೆ ತೊಂದರೆ ಕೊಡದಿರಲಿ. ಯೇಸುವಿನ ದಾಸನೆಂದು ಸೂಚಿಸುವ ಕೆಂಗುರುತುಗಳು ನನ್ನ ದೇಹದಲ್ಲಿ ಮುದ್ರಿತವಾಗಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನು ಮೇಲೆ ಯಾರೂ ನನಗೆ ತೊಂದರೆ ಕೊಡಬಾರದು. ನಾನು ನನ್ನ ದೇಹದಲ್ಲಿ ಕರ್ತ ಆಗಿರುವ ಯೇಸುವಿನ ಗುರುತುಗಳನ್ನು ಪಡೆದಿದ್ದೇನೆ.