Galatians 6:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರತಿಯೊಬ್ಬನು ತನ್ನ ನಡತೆಯನ್ನು ತಾನೇ ವಿಮರ್ಶಿಸಿಕೊಳ್ಳಲಿ. ಆಗ ತಾನೇನಾದರೂ ಹೆಚ್ಚಳಪಡುವಂತ ಕಾರ್ಯಗಳನ್ನು ಮಾಡಿದ್ದರೆ ಅವನಿಗೆ ತಿಳಿಯುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿಯೊಬ್ಬನು ತಾನು ಮಾಡಿದ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ. ಆಗ ಅವನು ತನ್ನ ನಿಮಿತ್ತದಿಂದ ಹೆಚ್ಚಳಪಡಬಹುದೇ ಹೊರತು ಮತ್ತೊಬ್ಬನೊಂದಿಗೆ ಹೋಲಿಸಿಕೊಂಡು ಹೆಚ್ಚಳಪಡಬೇಕಾಗಿರುವುದಿಲ್ಲ.
Kannada BSI Bible 2016
ಪ್ರತಿಯೊಬ್ಬನು ತನ್ನ ಸ್ವಂತ ಕೆಲಸವನ್ನು ಪರಿಶೋಧಿ ಸಲಿ; ಆಗ ಅವನು ತನ್ನಲ್ಲಿಯೇ ಸಂತೋಷಪಡುವದಕ್ಕೆ ಆಸ್ಪದವಾಗುವದೇ ಹೊರತು ಮತ್ತೊಬ್ಬನಲ್ಲಿ ಅಲ್ಲ;
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರತಿಯೊಬ್ಬನು ತಾನು ಮಾಡಿದ ಕೆಲಸವನ್ನು ಪರಿಶೋಧಿಸಲಿ; ಆಗ ಅವನು ತನ್ನ ನಿವಿುತ್ತದಿಂದ ಹೆಚ್ಚಳಪಡುವದಕ್ಕೆ ಆಸ್ಪದವಾಗುವದೇ ಹೊರತು ಮತ್ತೊಬ್ಬರ ನಿವಿುತ್ತದಿಂದಾಗುವದಿಲ್ಲ.
Kannada Bible (KNCL) BSI 2016
ಪ್ರತಿಯೊಬ್ಬನೂ ತನ್ನ ನಡತೆಯನ್ನು ತನ್ನಷ್ಟಕ್ಕೆ ತಾನೇ ಪರಿಶೋಧಿಸಿಕೊಳ್ಳಲಿ. ತನ್ನ ನಡತೆ ಒಳಿತಾಗಿದ್ದರೆ ಹೆಮ್ಮೆಪಡಲಿ. ಆದರೆ ಇತರರೊಂದಿಗೆ ಹೋಲಿಸಿ ಹೆಮ್ಮೆಪಡಬೇಕಾಗಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರತಿಯೊಬ್ಬನು ತನ್ನ ಸ್ವಂತ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ, ಆಗ ಅವನು ತನ್ನಲ್ಲಿ ಮಾತ್ರ ಸಂತೋಷಪಡುವುದಕ್ಕೆ ಆಸ್ಪದವಾಗುವುದೇ ಹೊರತು ಮತ್ತೊಬ್ಬನಲ್ಲಿ ಅಲ್ಲ.