Galatians 6:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಬ್ಬನು ತನ್ನ ಶರೀರಭಾವವನ್ನು ತೃಪ್ತಿಪಡಿಸುವುದಕ್ಕಾಗಿ ಪಾಪ ಕಾರ್ಯಗಳನ್ನು ಮಾಡಿದರೆ ಆ ಶರೀರಭಾವವು ಅವನಿಗೆ ನಿತ್ಯನಾಶವನ್ನು ಬರಮಾಡುತ್ತದೆ. ಆದರೆ ಒಬ್ಬನು ಪವಿತ್ರಾತ್ಮನನ್ನು ಮೆಚ್ಚಿಸುವುದಕ್ಕಾಗಿ ಒಳ್ಳೆಯ ಕಾರ್ಯಗಳನ್ನು ಮಾಡುವುದಾಗಿದ್ದರೆ, ಅವನು ಪವಿತ್ರಾತ್ಮನಿಂದ ನಿತ್ಯಜೀವವನ್ನು ಹೊಂದಿಕೊಳ್ಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶವನ್ನು ಕೊಯ್ಯುವನು. ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
Kannada BSI Bible 2016
ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶನವನ್ನು ಕೊಯ್ಯುವನು. ಆತ್ಮನನ್ನು ಕುರಿತು ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
Kannada Bible (KNCL) BSI 2016
ದೈಹಿಕ ವ್ಯಾಮೋಹವೆಂಬ ಸ್ವಭಾವದಲ್ಲಿ ಬಿತ್ತುವವನು ನಾಶವೆಂಬ ಫಲವನ್ನು ಕೊಯ್ಯುತ್ತಾನೆ. ಪವಿತ್ರಾತ್ಮ ಸ್ವಭಾವದಲ್ಲಿ ಬಿತ್ತುವವನು ಆತ್ಮದಿಂದ ನಿತ್ಯಜೀವವೆಂಬ ಫಲವನ್ನು ಕೊಯ್ಯುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಾಂಸಭಾವಕ್ಕೆ ಬಿತ್ತುವವನು, ಮಾಂಸಭಾವದಿಂದ ನಾಶವನ್ನು ಕೊಯ್ಯುವನು. ಆದರೆ ದೇವರ ಆತ್ಮರನ್ನು ಮೆಚ್ಚಿಸಲು ಬಿತ್ತುವವನು, ಆತ್ಮದಿಂದ ನಿತ್ಯಜೀವವನ್ನು ಕೊಯ್ಯುವನು.