Genesis 1:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ದೇವರು, “ಭೂಮಿಯು ಸಸ್ಯರಾಶಿಯನ್ನು ಬೆಳೆಸಲಿ; ಬೀಜಗಳನ್ನು ಫಲಿಸುವ ಸಸ್ಯಗಳು ಬೆಳೆಯಲಿ; ತನ್ನತನ್ನ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಹಣ್ಣಿನ ಮರಗಳು ಭೂಮಿಯ ಮೇಲೆ ಬೆಳೆಯಲಿ” ಅಂದನು. ಹಾಗೆಯೇ ಆಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು.
Kannada BSI Bible 2016
ತರುವಾಯ ದೇವರು--ಭೂಮಿಯು ಹುಲ್ಲನ್ನೂ ಬೀಜಕೊಡುವ ಪಲ್ಯವನ್ನೂ ತನ್ನೊಳಗೆ ಬೀಜವಿದ್ದು ತನ್ನ ಜಾತಿಯ ಪ್ರಕಾರ ಫಲಫಲಿಸುವ ಹಣ್ಣಿನ ಮರವನ್ನೂ ಭೂಮಿಯ ಮೇಲೆ ಮೊಳೆಯಿಸಲಿ ಎಂದು ಹೇಳಿದನು; ಅದು ಹಾಗೆಯೇ ಆಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ದೇವರು - ಭೂವಿುಯು ಹುಲ್ಲನ್ನೂ ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಸಲಿ; ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನೂ ಅವುಗಳ ಜಾತಿಗನುಸಾರವಾಗಿ ಹುಟ್ಟಿಸಲಿ ಎಂದು ಹೇಳಿದನು; ಹಾಗೆಯೇ ಆಯಿತು.
Kannada Bible (KNCL) BSI 2016
ತರುವಾಯ ದೇವರು, “ಭೂಮಿಯಲ್ಲಿ ಸಸ್ಯಗಳನ್ನೂ - ಎಲ್ಲ ತರದ ದವಸಧಾನ್ಯ, ಹಣ್ಣು ಹಂಪಲು ಇವುಗಳನ್ನು ಬಿಡುವ ಗಿಡಮರಬಳ್ಳಿಗಳನ್ನೂ ಬೆಳೆಯಿಸಲಿ,” ಎಂದರು. ಅದು ಹಾಗೆಯೇ ಆಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ದೇವರು, “ಭೂಮಿಯು ಹುಲ್ಲನ್ನೂ ಬೀಜಬಿಡುವ ಗಿಡಗಳನ್ನೂ ಅದರದರ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳನ್ನೂ ಉತ್ಪತ್ತಿ ಮಾಡಲಿ,” ಎಂದು ಹೇಳಿದರು. ಅದು ಹಾಗೆಯೇ ಆಯಿತು.