Genesis 1:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಸಿಗಳು ಭೂಮಿಯ ಮೇಲೆ ಬೆಳೆದವು. ಅವುಗಳಲ್ಲಿ ಬೀಜ ಫಲಿಸುವ ಗಿಡಗಳೂ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಮರಗಳೂ ಇದ್ದವು. ಪ್ರತಿಯೊಂದು ಸಸಿಯು ತನ್ನದೇ ಆದ ರೀತಿಯ ಬೀಜವನ್ನು ಫಲಿಸಿತು. ದೇವರಿಗೆ ಇವು ಒಳ್ಳೆಯದಾಗಿ ಕಂಡವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು
Kannada BSI Bible 2016
ಭೂಮಿಯು ಹುಲ್ಲನ್ನೂ ತನ್ನ ಜಾತಿಯ ಪ್ರಕಾರ ಬೀಜಕೊಡುವ ಪಲ್ಯವನ್ನೂ ತನ್ನ ಜಾತಿಯ ಪ್ರಕಾರ ತನ್ನೊಳಗೆ ಬೀಜವಿರುವ ಹಣ್ಣಿನ ಮರವನ್ನೂ ಮೊಳೆ ಯಿಸಿತು. ದೇವರು ಅದನ್ನು ಒಳ್ಳೆಯದೆಂದು ನೋಡಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂವಿುಯಲ್ಲಿ ಹುಲ್ಲು ಬೆಳೆಯಿತು; ತಮ್ಮತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು; ತಮ್ಮತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಕಾಣಿಸಿದವು. ದೇವರು ಅದನ್ನು ಒಳ್ಳೇದೆಂದು ನೋಡಿದನು.
Kannada Bible (KNCL) BSI 2016
ಭೂಮಿಯಲ್ಲಿ ಸಸ್ಯಗಳು ಬೆಳೆದವು; ಎಲ್ಲ ತರದ ದವಸಧಾನ್ಯಗಳನ್ನೂ ಹಣ್ಣುಹಂಪಲುಗಳನ್ನೂ ಬಿಡುವ ಗಿಡಮರಬಳ್ಳಿಗಳು ಕಾಣಿಸಿಕೊಂಡವು. ದೇವರ ಕಣ್ಣಿಗೆ ಅವು ಚೆನ್ನಾಗಿ ಕಂಡವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂಮಿಯ ಮೇಲೆ ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು ಮತ್ತು ಅದರದರ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳನ್ನು ಮೊಳೆಯಿಸಿದವು. ದೇವರು ಅದನ್ನು ಒಳ್ಳೆಯದೆಂದು ಕಂಡರು.