Genesis 1:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ದೇವರು, “ಆಕಾಶದಲ್ಲಿ ಬೆಳಕುಗಳು ಉಂಟಾಗಲಿ. ಈ ಬೆಳಕುಗಳು ಹಗಲುರಾತ್ರಿಗಳನ್ನು ಬೇರ್ಪಡಿಸಲಿ. ಈ ಬೆಳಕುಗಳು ವಿಶೇಷವಾದ ಗುರುತುಗಳಾಗಿದ್ದು, ವಿಶೇಷವಾದ ಸಮಯಗಳನ್ನೂ ದಿನಗಳನ್ನೂ ವರ್ಷಗಳನ್ನೂ ತೋರಿಸಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ದೇವರು, “ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ. ಅವು ಕಾಲಗಳನ್ನೂ, ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.
Kannada BSI Bible 2016
ದೇವರು--ಹಗಲನ್ನು ರಾತ್ರಿಯಿಂದ ಬೇರೆ ಮಾಡುವದಕ್ಕೆ ಆಕಾಶದ ವಿಶಾಲದಲ್ಲಿ ಬೆಳಕುಗಳಿರಲಿ; ಅವು ಹಗಲಿರುಳುಗಳನ್ನೂ ಸಮಯ ದಿನ ಸಂವತ್ಸರ ಗಳನ್ನೂ ತೋರಿಸುವದಕ್ಕೆ ಗುರುತುಗಳಾಗಿರಲಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ದೇವರು - ಆಕಾಶಮಂಡಲದಲ್ಲಿ ಬೆಳಕುಗಳು ಉಂಟಾಗಲಿ; ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ; ಇದಲ್ಲದೆ ಅವು ಗುರುತುಗಳಾಗಿದ್ದು ಸಮಯಗಳನ್ನೂ ದಿನಸಂವತ್ಸರಗಳನ್ನೂ ತೋರಿಸಲಿ;
Kannada Bible (KNCL) BSI 2016
ಅದಾದನಂತರ ದೇವರು,“ಹಗಲು ಇರುಳುಗಳನ್ನು ಬೇರೆಬೇರೆ ಮಾಡಲು ಋತುಕಾಲಗಳನ್ನೂ ದಿನಸಂವತ್ಸರಗಳನ್ನೂ ಸೂಚಿಸಲು, ಹಾಗು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ದೇವರು, “ಹಗಲನ್ನು ರಾತ್ರಿಯಿಂದ ಪ್ರತ್ಯೇಕಿಸುವುದಕ್ಕೆ ಆಕಾಶಮಂಡಲದಲ್ಲಿ ಬೆಳಕುಗಳಿರಲಿ; ಅವು ಕಾಲಗಳನ್ನೂ ದಿನ ಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.