Genesis 1:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ದೇವರು ಎರಡು ದೊಡ್ಡಬೆಳಕುಗಳನ್ನು ಸೃಷ್ಟಿಸಿದನು. ಹಗಲನ್ನಾಳುವುದಕ್ಕಾಗಿ ದೊಡ್ಡಬೆಳಕನ್ನೂ ರಾತ್ರಿಯನ್ನಾಳುವುದಕ್ಕಾಗಿ ಅದಕ್ಕಿಂತ ಚಿಕ್ಕಬೆಳಕನ್ನು ಸೃಷ್ಟಿಸಿದನು. ಆತನು ನಕ್ಷತ್ರಗಳನ್ನು ಸಹ ಸೃಷ್ಟಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಹಗಲನ್ನಾಳುವುದಕ್ಕೆ ದೊಡ್ಡ ದೀಪವನ್ನೂ ಇರುಳನ್ನಾಳುವುದಕ್ಕೆ ಚಿಕ್ಕ ದೀಪವನ್ನೂ ಹೀಗೆ ಎರಡು ದೊಡ್ಡ ದೀಪಗಳನ್ನು ಉಂಟು ಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟು ಮಾಡಿದನು.
Kannada BSI Bible 2016
ದೇವರು ಎರಡು ದೊಡ್ಡ ಬೆಳಕುಗಳನ್ನು ಮಾಡಿದನು; ದೊಡ್ಡ ಬೆಳಕು ಹಗಲನ್ನಾಳುವದಕ್ಕೂ ಚಿಕ್ಕ ಬೆಳಕು ರಾತ್ರಿಯನ್ನಾಳು ವದಕ್ಕೂ ಮಾಡಿದ್ದಲ್ಲದೆ ನಕ್ಷತ್ರಗಳನ್ನು ಸಹ ಮಾಡಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಹಗಲನ್ನಾಳುವದಕ್ಕೆ ದೊಡ್ಡ ಬೆಳಕನ್ನೂ ಇರುಳನ್ನಾಳುವದಕ್ಕೆ ಚಿಕ್ಕ ಬೆಳಕನ್ನೂ, ಈ ಎರಡು ದೊಡ್ಡ ಬೆಳಕುಗಳನ್ನು ಉಂಟುಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟುಮಾಡಿದನು.
Kannada Bible (KNCL) BSI 2016
ಹಗಲನ್ನಾಳುವುದಕ್ಕೆ ಸೂರ್ಯನನ್ನೂ ಇರುಳನ್ನಾಳುವುದಕ್ಕೆ ಚಂದ್ರನನ್ನೂ, ಹೀಗೆ ಎರಡು ದೀವಿಗೆಗಳನ್ನು ಸೃಷ್ಟಿ ಮಾಡಿದರು. ಅದು ಮಾತ್ರವಲ್ಲ, ನಕ್ಷತ್ರಗಳನ್ನೂ ಅವರು ಸೃಷ್ಟಿಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಗಲನ್ನಾಳುವುದಕ್ಕೆ ದೊಡ್ಡ ಬೆಳಕನ್ನು, ರಾತ್ರಿಯನ್ನಾಳುವುದಕ್ಕೆ ಚಿಕ್ಕ ಬೆಳಕನ್ನು ಎಂಬಂತೆ ದೇವರು ಎರಡು ದೊಡ್ಡ ಬೆಳಕುಗಳನ್ನು ಉಂಟುಮಾಡಿದರು. ದೇವರು ನಕ್ಷತ್ರಗಳನ್ನು ಸಹ ಉಂಟುಮಾಡಿದರು.