Genesis 1:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಗಲನ್ನು ಮತ್ತು ರಾತ್ರಿಯನ್ನು ಆಳಲೆಂದು ದೇವರು ಈ ಬೆಳಕುಗಳನ್ನು ಆಕಾಶದಲ್ಲಿರಿಸಿದನು. ಇವು ಬೆಳಕನ್ನು ಕತ್ತಲೆಯಿಂದ ಬೇರ್ಪಡಿಸಿದವು. ದೇವರಿಗೆ ಇವು ಒಳ್ಳೆಯದಾಗಿ ಕಂಡವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಗಲಿರುಳುಗಳನ್ನು ಆಳುವುದಕ್ಕೂ ಬೆಳಕನ್ನು, ಕತ್ತಲನ್ನು ಬೇರೆ ಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದನು. ದೇವರು ಅದನ್ನು ಒಳ್ಳೆಯದೆಂದು ಕಂಡನು.
Kannada BSI Bible 2016
ಇದಲ್ಲದೆ ಅವು ಹಗಲನ್ನು ಮತ್ತು ರಾತ್ರಿಯನ್ನು ಆಳುವದಕ್ಕೂ ಬೆಳಕನ್ನು ಕತ್ತಲೆಯಿಂದ ಬೇರೆ ಮಾಡುವದಕ್ಕೂ ಇರಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಗಲಿರುಳುಗಳನ್ನು ಆಳುವದಕ್ಕೂ ಬೆಳಕನ್ನು ಕತ್ತಲನ್ನು ಬೇರೆ ಬೇರೆ ಮಾಡುವದಕ್ಕೂ ಅವುಗಳನ್ನು ನೇವಿುಸಿದನು. ಆತನು ಅದನ್ನು ಒಳ್ಳೇದೆಂದು ನೋಡಿದನು.
Kannada Bible (KNCL) BSI 2016
ಹಗಲಿರುಳುಗಳನ್ನು ಆಳುವುದಕ್ಕೂ, ಬೆಳಕನ್ನೂ ಕತ್ತಲನ್ನೂ ಬೇರೆಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದರು. ದೇವರ ಕಣ್ಣಿಗೆ ಅದೂ ಚೆನ್ನಾಗಿ ಕಂಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಗಲನ್ನು ಮತ್ತು ರಾತ್ರಿಯನ್ನು ಆಳುವುದಕ್ಕೂ ಬೆಳಕನ್ನು ಕತ್ತಲೆಯಿಂದ ಪ್ರತ್ಯೇಕಿಸುವುದಕ್ಕೂ ದೇವರು ಅವುಗಳನ್ನು ನೇಮಿಸಿದರು. ದೇವರು ಅದನ್ನು ಒಳ್ಳೆಯದೆಂದು ಕಂಡರು.