Genesis 1:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಭೂಮಿಯು ಅಸ್ತವ್ಯಸ್ತವಾಗಿಯೂ ಬರಿದಾಗಿಯೂ ಇತ್ತು. ಭೂಮಿಯ ಮೇಲೆ ಏನೂ ಇರಲಿಲ್ಲ. ಸಾಗರದ ಮೇಲೆ ಕತ್ತಲು ಕವಿದಿತ್ತು. ದೇವರಾತ್ಮನು ಜಲಸಮೂಹಗಳ ಮೇಲೆ ಚಲಿಸುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು.
Kannada BSI Bible 2016
ಭೂಮಿ ಯು ನಿರಾಕಾರವಾಗಿಯೂ ಶೂನ್ಯವಾಗಿಯೂ ಇತ್ತು; ಅಗಾಧದ ಮೇಲೆ ಕತ್ತಲೆ ಇತ್ತು. ದೇವರ ಆತ್ಮನು ನೀರುಗಳ ಮೇಲೆ ಚಲಿಸುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂವಿುಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು; ಆದಿಸಾಗರದ ಮೇಲೆ ಕತ್ತಲಿತ್ತು; ದೇವರಾತ್ಮವು ಜಲಸಮೂಹಗಳ ಮೇಲೆ ಚಲಿಸುತ್ತಿತ್ತು.
Kannada Bible (KNCL) BSI 2016
ಭೂಮಿ ನಿರಾಕಾರವಾಗಿಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕಗ್ಗತ್ತಲು ಕವಿದಿತ್ತು. ದೇವರಾತ್ಮ ಜಲರಾಶಿಯ ಮೇಲೆ ಚಲಿಸುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂಮಿಯು ನಿರಾಕಾರವಾಗಿಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲೆ ಕವಿದಿತ್ತು. ದೇವರಾತ್ಮರು ಜಲ ಸಮೂಹಗಳ ಮೇಲೆ ಚಲಿಸುತ್ತಿದ್ದರು.