Genesis 1:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ದೇವರು, “ನೀರಿನಲ್ಲಿ ಅನೇಕ ಜಲಚರಗಳು ತುಂಬಿಕೊಳ್ಳಲಿ. ಭೂಮಿಯ ಮೇಲೆ ಆಕಾಶದಲ್ಲಿ ಪಕ್ಷಿಗಳು ಹಾರಾಡಲಿ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು.
Kannada BSI Bible 2016
ದೇವರು--ಚಲಿಸುವ ಜೀವಜಂತುಗಳನ್ನು ನೀರು ಗಳು ಸಮೃದ್ಧಿಯಾಗಿ ಬರಮಾಡಲಿ; ಭೂಮಿಯ ಮೇಲೆ ಆಕಾಶದ ವಿಶಾಲದಲ್ಲಿ ಪಕ್ಷಿಗಳು ಹಾರಾಡಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ದೇವರು - ಗುಂಪುಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ; ಪಕ್ಷಿಗಳು ಭೂವಿುಯ ಮೇಲೆ ಅಂತರಿಕ್ಷದೊಳಗೆ ಹಾರಾಡಲಿ ಎಂದು ಹೇಳಿದನು.
Kannada Bible (KNCL) BSI 2016
ಆಮೇಲೆ ದೇವರು, “ಹಲವಾರು ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಭೂಮಿ ಆಕಾಶಗಳ ನಡುವೆ ಪಕ್ಷಿಗಳು ಹಾರಾಡಲಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ದೇವರು, “ನೀರಿನಲ್ಲಿ ಜೀವಜಂತುಗಳು ತುಂಬಿಕೊಳ್ಳಲಿ, ಭೂಮಿಯ ಮೇಲೆ ಆಕಾಶಮಂಡಲದಲ್ಲಿ ಪಕ್ಷಿಗಳು ಹಾರಾಡಲಿ,” ಎಂದರು.