Genesis 1:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ದೇವರು ಸಮುದ್ರದ ಬೃಹದಾಕಾರದ ಪ್ರಾಣಿಗಳನ್ನು, ಸಮುದ್ರದಲ್ಲಿ ಚಲಿಸುವ ಪ್ರತಿಯೊಂದು ಬಗೆಯ ಜೀವಿಗಳನ್ನು ಮತ್ತು ರೆಕ್ಕೆಗಳುಳ್ಳ ಪ್ರತಿಯೊಂದು ಬಗೆಯ ಪಕ್ಷಿಗಳನ್ನು ಸೃಷ್ಟಿಸಿದನು. ಆತನಿಗೆ ಇವು ಒಳ್ಳೆಯದಾಗಿ ಕಂಡವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.
Kannada BSI Bible 2016
ಇದಲ್ಲದೆ ತಮ್ಮ ಜಾತಿಯ ಪ್ರಕಾರ ನೀರುಗಳು ಸಮೃದ್ಧಿಯಾಗಿ ಬರಮಾಡಿದ ದೊಡ್ಡ ತಿಮಿಂಗಿಲಗಳನ್ನೂ ಚಲಿಸುವ ಪ್ರತಿಯೊಂದು ಜೀವ ಜಂತುಗಳನ್ನೂ ತನ್ನ ಜಾತಿಗನುಸಾರವಾದ ರೆಕ್ಕೆಗಳಿದ್ದ ಪ್ರತಿಯೊಂದು ಪಕ್ಷಿಯನ್ನೂ ದೇವರು ಸೃಷ್ಟಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ದೇವರು ಮಹಾಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೇದೆಂದು ನೋಡಿದನು.
Kannada Bible (KNCL) BSI 2016
ಈ ಪ್ರಕಾರ ದೇವರು ದೊಡ್ಡ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ನಾನಾ ವಿಧವಾದ ಜೀವಜಂತುಗಳನ್ನೂ ರೆಕ್ಕೆಗಳುಳ್ಳ ಸಕಲ ವಿಧವಾದ ಪಕ್ಷಿಗಳನ್ನೂ ಸೃಷ್ಟಿಮಾಡಿದರು. ದೇವರ ದೃಷ್ಟಿಗೆ ಅದೂ ಚೆನ್ನಾಗಿ ಕಂಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ದೇವರು ದೊಡ್ಡ ಜಲಚರಗಳನ್ನು, ನೀರಿನಲ್ಲಿ ತುಂಬಿರುವ ಎಲ್ಲಾ ಚಲಿಸುವ ಜೀವ ಜಂತುಗಳನ್ನು, ರೆಕ್ಕೆಗಳುಳ್ಳ ಪ್ರತಿಯೊಂದು ಪಕ್ಷಿಯನ್ನು ಅವುಗಳ ಜಾತಿಗನುಸಾರವಾಗಿ ಸೃಷ್ಟಿಸಿದರು. ದೇವರು ಅದನ್ನು ಒಳ್ಳೆಯದೆಂದು ಕಂಡರು.