Genesis 1:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ದೇವರು, “ಭೂಮಿಯು ಅನೇಕ ಬಗೆಯ ಪ್ರಾಣಿಗಳನ್ನು ಅವುಗಳ ಜಾತಿಗನುಸಾರವಾಗಿ ಹುಟ್ಟಿಸಲಿ. ಪ್ರತಿಯೊಂದು ಬಗೆಯ ದೊಡ್ಡ ಪ್ರಾಣಿಗಳು ಮತ್ತು ಹರಿದಾಡುವ ಚಿಕ್ಕ ಪ್ರಾಣಿಗಳು ಹುಟ್ಟಿಕೊಂಡು ಅಭಿವೃದ್ಧಿಯಾಗಲಿ” ಅಂದನು. ಹಾಗೆಯೇ ಆಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯೇ ಆಯಿತು.
Kannada BSI Bible 2016
ದೇವರು--ಆಯಾ ಜಾತಿಯ ಜೀವಜಂತುಗಳನ್ನೂ ಪಶುಗಳನ್ನೂ ಹರಿದಾಡುವ ಕ್ರಿಮಿಗಳನ್ನೂ ತನ್ನ ಜಾತಿಗನುಸಾರವಾದ ಭೂಮೃಗಗಳನ್ನೂ ಭೂಮಿಯು ಬರಮಾಡಲಿ ಅಂದನು; ಅದು ಹಾಗೆಯೇ ಆಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ದೇವರು - ಭೂವಿುಯಿಂದ ಜೀವಜಂತುಗಳು ಉಂಟಾಗಲಿ; ಪಶುಕ್ರಿವಿುಗಳೂ ಕಾಡುಮೃಗಗಳೂ ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ ಅಂದನು; ಹಾಗೆಯೇ ಆಯಿತು.
Kannada Bible (KNCL) BSI 2016
ಆ ಬಳಿಕ ದೇವರು, “ಭೂಮಿಯಿಂದ ಎಲ್ಲ ತರದ ಜೀವಜಂತುಗಳು ಸೃಷ್ಟಿಯಾಗಲಿ. ದೊಡ್ಡ - ಚಿಕ್ಕ ಸಾಕುಪ್ರಾಣಿಗಳೂ ಕಾಡುಮೃಗಗಳೂ ಹುಟ್ಟಲಿ,“ ಎಂದರು. ಅಂತೆಯೇ ಆಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ದೇವರು, “ಭೂಮಿಯಿಂದ ಎಲ್ಲಾ ತರಹದ ಜೀವಿಗಳು ಉಂಟಾಗಲಿ: ಪಶುಗಳು, ನೆಲದ ಮೇಲೆ ಹರಿದಾಡುವ ಜೀವಿಗಳು, ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಉಂಟಾಗಲಿ,” ಎಂದರು. ಅದು ಹಾಗೆಯೇ ಆಯಿತು.