Genesis 1:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ದೇವರು ಪ್ರತಿಯೊಂದು ಬಗೆಯ ಕಾಡುಪ್ರಾಣಿಗಳನ್ನು, ಸಾಕುಪ್ರಾಣಿಗಳನ್ನು ಮತ್ತು ಹರಿದಾಡುವ ಎಲ್ಲಾ ಕ್ರಿಮಿಗಳನ್ನು ಸೃಷ್ಟಿಸಿದನು. ಆತನಿಗೆ ಇವು ಒಳ್ಳೆಯದಾಗಿ ಕಂಡವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.
Kannada BSI Bible 2016
ದೇವರು ಅದರ ಜಾತಿಗನುಸಾರವಾಗಿ ಭೂಮೃಗಗಳನ್ನೂ ಅವುಗಳ ಜಾತಿಗನುಸಾರವಾಗಿ ಪಶುಗಳನ್ನೂ ತನ್ನ ಜಾತಿಗನುಸಾರವಾಗಿ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದನ್ನೂ ಮಾಡಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಕಾಡುಮೃಗಗಳನ್ನೂ ಪಶುಗಳನ್ನೂ ನೆಲದ ಮೇಲೆ ಹರಿದಾಡುವ ಕ್ರಿವಿುಕೀಟಗಳನ್ನೂ ಅವುಗಳ ಜಾತಿಗನುಸಾರ ಉಂಟುಮಾಡಿದನು. ಆತನು ಅದನ್ನು ಒಳ್ಳೇದೆಂದು ನೋಡಿದನು.
Kannada Bible (KNCL) BSI 2016
ಎಲ್ಲ ತರದ ದೊಡ್ಡ - ಚಿಕ್ಕ ಕಾಡುಮೃಗಗಳನ್ನೂ ಸಾಕುಪ್ರಾಣಿಗಳನ್ನೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನು ದೇವರು ಸೃಷ್ಟಿಮಾಡಿದರು. ಅವರ ನೋಟಕ್ಕೆ ಅದು ಚೆನ್ನಾಗಿ ಕಂಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ದೇವರು ಎಲ್ಲ ತರದ ಕಾಡುಮೃಗಗಳನ್ನೂ ಪಶುಗಳನ್ನೂ ನೆಲದ ಮೇಲೆ ಹರಿದಾಡುವ ಜೀವಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದರು. ದೇವರು ಅದನ್ನು ಒಳ್ಳೆಯದೆಂದು ಕಂಡರು.