Genesis 1:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ದೇವರು, “ಈಗ ನಾವು ಮನುಷ್ಯನನ್ನು ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ನಿರ್ಮಿಸೋಣ. ಮನುಷ್ಯರು ಸಮುದ್ರದಲ್ಲಿರುವ ಎಲ್ಲಾ ಮೀನುಗಳ ಮೇಲೆ, ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳ ಮೇಲೆ ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳ ಮೇಲೆ ದೊರೆತನ ಮಾಡಲಿ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.
Kannada BSI Bible 2016
ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ದೇವರು - ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟುಮಾಡೋಣ; ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿವಿುಕೀಟಗಳ ಮೇಲೆಯೂ ಎಲ್ಲಾ ಭೂವಿುಯ ಮೇಲೆಯೂ ದೊರೆತನಮಾಡಲಿ ಅಂದನು.
Kannada Bible (KNCL) BSI 2016
ಅದಾದನಂತರ ದೇವರು, “ನಮ್ಮಂತೆಯೇ ಇರುವ ಹಾಗು ನಮ್ಮನ್ನು ಹೋಲುವ, ಮನುಷ್ಯರನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ದೊಡ್ಡ - ಚಿಕ್ಕ ಸಾಕುಪ್ರಾಣಿ ಹಾಗು ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ಮೇಲೆಯೂ ದೊರೆತನ ಮಾಡಲಿ,” ಎಂದರು. ಹೀಗೆ ದೇವರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ದೇವರು, “ನಾವು ನಮ್ಮ ಸ್ವರೂಪದಲ್ಲಿ, ನಮ್ಮ ಹೋಲಿಕೆಯಲ್ಲಿ ಮನುಷ್ಯನನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ಮಾಡಲಿ,” ಎಂದರು.