Genesis 1:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾಗಿ ಸೃಷ್ಟಿಸಿದನು. ಆತನು ಅವರನ್ನು ಗಂಡು ಮತ್ತು ಹೆಣ್ಣುಗಳಾಗಿ ರೂಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”
Kannada BSI Bible 2016
ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು, ದೇವರರೂಪದಲ್ಲಿ ಆತನು ಅವನನ್ನು ಸೃಷ್ಟಿಸಿದನು. ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು; ದೇವಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು; ಅವರನ್ನು ಗಂಡುಹೆಣ್ಣಾಗಿ ನಿರ್ಮಿಸಿದನು.
Kannada Bible (KNCL) BSI 2016
ಸೃಷ್ಟಿಸಿದರು ನರರನ್ನು ತಮ್ಮ ಹೋಲಿಕೆಯಲ್ಲಿ ಸೃಷ್ಟಿಸಿದರವರನ್ನು ದೇವಾನುರೂಪದಲ್ಲಿ ಸೃಷ್ಟಿಸಿದರವರನ್ನು ಸ್ತ್ರೀಪುರುಷರನ್ನಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ದೇವರು ಮನುಷ್ಯನನ್ನು ತಮ್ಮ ಸ್ವರೂಪದಲ್ಲಿ ಸೃಷ್ಟಿ ಮಾಡಿದರು. ದೇವರ ಸ್ವರೂಪದಲ್ಲಿಯೇ ಅವರನ್ನು ಸೃಷ್ಟಿ ಮಾಡಿದರು. ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿ ಮಾಡಿದರು.