Genesis 1:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಅವರನ್ನು ಆಶೀರ್ವದಿಸಿ, “ನೀವು ಅನೇಕ ಮಕ್ಕಳನ್ನು ಪಡೆದು ಭೂಮಿಯಲ್ಲೆಲ್ಲಾ ಹರಡಿಕೊಂಡು ಅದನ್ನು ಸ್ವಾಧೀನಪಡಿಸಿಕೊಳ್ಳಿರಿ. ಸಮುದ್ರದಲ್ಲಿರುವ ಮೀನುಗಳ ಮೇಲೆ, ಆಕಾಶದಲ್ಲಿರುವ ಪಕ್ಷಿಗಳ ಮೇಲೆ ಮತ್ತು ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆ ದೊರೆತನ ಮಾಡಿರಿ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.
Kannada BSI Bible 2016
ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ - ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂವಿುಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂವಿುಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನಮಾಡಿರಿ ಅಂದನು.
Kannada Bible (KNCL) BSI 2016
ಅವರನ್ನು ದೇವರು ಆಶೀರ್ವದಿಸಿ, “ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿಕೊಳ್ಳಿರಿ; ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಅವರನ್ನು ಆಶೀರ್ವದಿಸಿ, “ನೀವು ಸಂತಾನವುಳ್ಳವರಾಗಿ, ಸಂಖ್ಯೆಯಲ್ಲಿ ಹೆಚ್ಚಿರಿ, ಭೂಮಿಯನ್ನು ತುಂಬಿಸಿ ಅದನ್ನು ಆಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ನೆಲದ ಮೇಲೆ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ನಡೆಸಿರಿ,” ಎಂದು ಅವರಿಗೆ ಹೇಳಿದರು.