Genesis 1:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಭೂಮಿಯ ಮೇಲಿರುವ ಪ್ರಾಣಿಗಳಿಗೆಲ್ಲಾ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆಲ್ಲಾ ಭೂಮಿಯ ಮೇಲೆ ಹರಿದಾಡುವ ಕ್ರಿಮಿಕೀಟಗಳಿಗೆಲ್ಲಾ ಆಹಾರಕ್ಕಾಗಿ ಸಸ್ಯರಾಶಿಯನ್ನು ಕೊಟ್ಟಿದ್ದೇನೆ” ಅಂದನು. ಹಾಗೆಯೇ ಆಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು.
Kannada BSI Bible 2016
ಇದಲ್ಲದೆ ನಾನು ಭೂಮಿಯ ಪ್ರತಿ ಯೊಂದು ಮೃಗಕ್ಕೂ ಆಕಾಶದ ಪ್ರತಿಯೊಂದು ಪಕ್ಷಿಗೂ ಭೂಮಿಯ ಮೇಲೆ ಹರಿದಾಡುವ ಜೀವವುಳ್ಳ ಪ್ರತಿ ಯೊಂದಕ್ಕೂ ಹಸುರಾದ ಪ್ರತಿಯೊಂದು ಪಲ್ಯವನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಅಂದನು; ಅದು ಹಾಗೆಯೇ ಆಯಿತು.ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಭೂವಿುಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿವಿುಕೀಟಗಳು ಎಂಬ ಜೀವಿಗಳಿಗೆ ಎಲ್ಲಾ ಹುಲ್ಲುಸೊಪ್ಪುಗಳನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಎಂದು ಹೇಳಿದನು; ಅದು ಹಾಗೆಯೇ ಆಯಿತು.
Kannada Bible (KNCL) BSI 2016
ಇದಲ್ಲದೆ, ಭೂಮಿಯ ಮೇಲೆ ತಿರುಗಾಡುವ ದೊಡ್ಡ - ಚಿಕ್ಕ ಮೃಗಗಳಿಗೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳಿಗೂ ಹುಲ್ಲು ಸೊಪ್ಪುಗಳನ್ನು ಆಹಾರವಾಗಿ ಕೊಟ್ಟಿದ್ದೇನೆ,” ಎಂದು ಹೇಳಿದರು. ಹಾಗೆಯೇ ಆಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂಮಿಯಲ್ಲಿರುವ ಎಲ್ಲಾ ಜೀವಿಗಳಿಗೂ ಆಕಾಶದ ಪಕ್ಷಿಗಳಿಗೂ ನೆಲದ ಮೇಲೆ ಹರಿದಾಡುವ ಜೀವಿಗಳಿಗೂ ಉಸಿರನ್ನು ಹೊಂದಿರುವ ಪ್ರತಿಯೊಂದು ಜೀವಿಗಳಿಗೆ ಹಸಿರಾದ ಸಸ್ಯಗಳನ್ನೆಲ್ಲಾ ನಾನು ಆಹಾರವಾಗಿ ಕೊಟ್ಟಿದ್ದೇನೆ,” ಎಂದರು. ಅದು ಹಾಗೆಯೇ ಆಯಿತು.