Genesis 1:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ತಾನು ಸೃಷ್ಟಿಸಿದ್ದನ್ನೆಲ್ಲಾ ನೋಡಿದಾಗ, ಅವು ಆತನಿಗೆ ಒಳ್ಳೆಯದಾಗಿ ಕಂಡವು. ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಆರನೆ ದಿನವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.
Kannada BSI Bible 2016
ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅದು ಬಹು ಒಳ್ಳೇದಾಗಿತ್ತು. ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.
Kannada Bible (KNCL) BSI 2016
ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚೆನ್ನಾಗಿತ್ತು. ಹೀಗೆ ಬೈಗೂ ಬೆಳಗೂ ಆಗಿ ಆರನೆಯ ದಿನ ಆಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ತಾವು ಉಂಟು ಮಾಡಿದ್ದನ್ನೆಲ್ಲಾ ನೋಡಲು, ಅವೆಲ್ಲವೂ ಬಹಳ ಒಳ್ಳೆಯದಾಗಿದ್ದವು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.