Genesis 1:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರಿಗೆ ಬೆಳಕು ಒಳ್ಳೆಯದಾಗಿ ಕಂಡಿತು. ಬಳಿಕ ದೇವರು ಕತ್ತಲೆಯಿಂದ ಬೆಳಕನ್ನು ಬೇರ್ಪಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಆ ಬೆಳಕನ್ನು ಒಳ್ಳೆಯದೆಂದು ಕಂಡನು.
Kannada BSI Bible 2016
ದೇವರು ಬೆಳಕನ್ನು ಒಳ್ಳೆಯದೆಂದು ನೋಡಿದನು; ದೇವರು ಬೆಳಕನ್ನು ಕತ್ತಲೆಯಿಂದ ಬೇರೆ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಆ ಬೆಳಕನ್ನು ಒಳ್ಳೇದೆಂದು ನೋಡಿದನು. ದೇವರು ಬೆಳಕನ್ನೂ ಕತ್ತಲೆಯನ್ನೂ ಬೇರೆ ಬೇರೆ ಮಾಡಿ ಬೆಳಕಿಗೆ ಹಗಲೆಂದೂ ಕತ್ತಲೆಗೆ ಇರುಳೆಂದೂ ಹೆಸರಿಟ್ಟನು.
Kannada Bible (KNCL) BSI 2016
ದೇವರ ಕಣ್ಣಿಗೆ ಅದು ಚೆನ್ನಾಗಿ ಕಂಡಿತು. ಅವರು ಬೆಳಕನ್ನೂ ಕತ್ತಲೆಯನ್ನೂ ಬೇರೆಬೇರೆ ಮಾಡಿ ಬೆಳಕಿಗೆ ಹಗಲೆಂದೂ ಕತ್ತಲೆಗೆ ಇರುಳೆಂದೂ ಹೆಸರಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಬೆಳಕನ್ನು ಒಳ್ಳೆಯದೆಂದು ಕಂಡರು. ದೇವರು ಬೆಳಕನ್ನು ಕತ್ತಲೆಯಿಂದ ಪ್ರತ್ಯೇಕಿಸಿದರು.