Genesis 10:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಬರನಿಗೆ ಇಬ್ಬರು ಗಂಡುಮಕ್ಕಳಿದ್ದರು. ಮೊದಲನೆಯ ಮಗನು ಹುಟ್ಟಿದ ಕಾಲದಲ್ಲಿ ಭೂಮಿಯ ಜನಾಂಗಗಳು ವಿಂಗಡವಾದದ್ದರಿಂದ ಅವನಿಗೆ ಪೆಲೆಗ್ ಎಂದು ಹೆಸರಿಟ್ಟನು; ಎರಡನೆಯ ಮಗನ ಹೆಸರು ಯೊಕ್ತಾನ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಬರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗೆಂಬ ಹೆಸರು; ಅವನ ಕಾಲದಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತ್ತು. ಅವನ ತಮ್ಮನ ಹೆಸರು ಯೊಕ್ತಾನ್.
Kannada BSI Bible 2016
ಎಬರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನ ಹೆಸರು ಪೆಲೆಗನು, ಯಾಕಂದರೆ ಅವನ ದಿನಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು. ಅವನ ಸಹೋದರನ ಹೆಸರು ಯೊಕ್ತಾನ್‌.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಬರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗೆಂಬ ಹೆಸರು; ಅವನ ಕಾಲದಲ್ಲಿ ಭೂವಿುಯ ಜನಗಳು ವಿಂಗಡವಾದವು. ಅವನ ತಮ್ಮನ ಹೆಸರು ಯೊಕ್ತಾನ್.
Kannada Bible (KNCL) BSI 2016
ಎಬರನಿಗೆ ಇಬ್ಬರು ಮಕ್ಕಳು. ಒಬ್ಬನಿಗೆ ಪೆಲೆಗೆಂಬ ಹೆಸರು. ಇವನ ಕಾಲದಲ್ಲೇ ಭೂಜನದ ವಿಭಜನೆ ಆದುದು. ಅವನ ತಮ್ಮನ ಹೆಸರು ಯೊಕ್ತಾನ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಬೆರನಿಗೆ ಇಬ್ಬರು ಪುತ್ರರು ಹುಟ್ಟಿದರು. ಒಬ್ಬನಿಗೆ ಪೆಲೆಗ್ ಎಂದು ಹೆಸರಿಡಲಾಯಿತು, ಅವನ ಕಾಲದಲ್ಲಿ ಲೋಕದಲ್ಲಿಯ ಜನರು ವಿಭಾಗವಾದದ್ದರಿಂದ ಈ ಹೆಸರು ಅವನಿಗೆ ಬಂದಿತು. ಅವನ ತಮ್ಮನ ಹೆಸರು ಯೊಕ್ತಾನ್.