Genesis 10:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೋಹನ ಗಂಡುಮಕ್ಕಳಿಂದ ಉಂಟಾದ ವಂಶಗಳವರ ಪಟ್ಟಿಯಿದು. ಅವರು ತಮ್ಮ ಜನಾಂಗಗಳಿಗನುಸಾರವಾಗಿ ಹರಡಿಕೊಂಡಿದ್ದರು. ಜಲಪ್ರಳಯದ ನಂತರ ಭೂಮಿಯಲ್ಲೆಲ್ಲಾ ಹರಡಿಕೊಂಡವರು ಈ ವಂಶಗಳವರೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನಾಂಗಗಳ ಸಂತತಿಯ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ.
Kannada BSI Bible 2016
ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರ ವಾಗಿರುವ ನೋಹನ ಕುಮಾರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ವಿಭಾಗಿಸಲ್ಪಟ್ಟವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಂತತಿ ಜನಾಂಗಗಳ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದನಂತರ ಭೂವಿುಯ ಮೇಲೆ ಹರಡಿಕೊಂಡ ಜನಾಂಗಗಳವರು ಇವರೇ.
Kannada Bible (KNCL) BSI 2016
ಸಂತತಿ - ಜನಾಂಗಗಳ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರವಾಗಿ ನೋಹನ ಪುತ್ರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ಹರಡಿಕೊಂಡವು.