Genesis 10:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ಮುಂದೆ ಅವನು ಚತುರ ಬೇಟೆಗಾರನಾಗಿದ್ದನು. ಆದ್ದರಿಂದ ಜನರು ಬೇರೆಯವರನ್ನು ಅವನಿಗೆ ಹೋಲಿಸಿ, “ಅವನು ನಿಮ್ರೋದನಂತೆ, ಯೆಹೋವನ ಮುಂದೆ ಚತುರ ಬೇಟೆಗಾರ” ಎಂದು ಹೇಳುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ದೃಷ್ಟಿಯಲ್ಲಿ ನಿಮ್ರೋದನು ದಿಟ್ಟ ಬೇಟೆಗಾರನಾಗಿದ್ದನು. ಆದುದರಿಂದ “ಯೆಹೋವನು ನಿನ್ನನ್ನು ದಿಟ್ಟ ಬೇಟೆಗಾರನಾಗಿಸಲಿ” ಎಂಬ ಗಾದೆ ಇಂದಿನವರೆಗೂ ಹೇಳುವುದುಂಟು.
Kannada BSI Bible 2016
ಅವನು ಕರ್ತನ ಮುಂದೆ ಬಲಿಷ್ಠನಾದ ಬೇಟೆಗಾರನಾಗಿದ್ದನು. ಆದದರಿಂದ--ಕರ್ತನ ಮುಂದೆ ಬಲಿಷ್ಠನಾದ ಬೇಟೆ ಗಾರನಾಗಿದ್ದ ನಿಮ್ರೋದನು ಎಂಬ ಮಾತು ಹೇಳ ಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅತಿ ಸಾಹಸಿಯಾದ ಬೇಟೆಗಾರನು. ನಿಮ್ರೋದನಂತೆ ಅತಿ ಸಾಹಸಿಯಾದ ಬೇಟೆಗಾರನೆಂದು ಈಗಲೂ ಹೇಳುವದುಂಟಲ್ಲಾ.
Kannada Bible (KNCL) BSI 2016
ದೇವರ ದೃಷ್ಟಿಯಲ್ಲಿ ದಿಟ್ಟ ಬೇಟೆಗಾರ. \ಪ್ರಭು ನಿನ್ನನ್ನು ನಿಮ್ರೋದನಂಥ ದಿಟ್ಟಬೇಟೆಗಾರನಾಗಿಸಲಿ\ ಎಂಬ ನಾಣ್ನುಡಿ ಇಂದಿಗೂ ಇದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಯೆಹೋವ ದೇವರ ಮುಂದೆ ಬಲಿಷ್ಠ ಬೇಟೆಗಾರನಾದನು. ಆದ್ದರಿಂದ, “ನಿಮ್ರೋದನಂತೆ ಯೆಹೋವ ದೇವರ ಮುಂದೆ ಬಲಿಷ್ಠ ಬೇಟೆಗಾರ” ಎಂಬ ಹೇಳಿಕೆ ಇಂದಿಗೂ ಇದೆ.