Genesis 11:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಾರಾನನು ಬಾಬಿಲೋನಿನ ತನ್ನ ಸ್ವಂತ ಸ್ಥಳವಾದ ಊರ್ ಎಂಬಲ್ಲಿ ಸತ್ತುಹೋದನು. ಹಾರಾನನು ಸತ್ತಾಗ ಅವನ ತಂದೆ ಇನ್ನೂ ಜೀವಂತವಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾರಾನನು ತಾನು ಹುಟ್ಟಿದ ದೇಶದೊಳಗೆ ಕಲ್ದೀಯರ ಊರ್ ಎಂಬ ಪಟ್ಟಣದಲ್ಲಿ ತನ್ನ ತಂದೆಯಾದ ತೆರಹನ ಮುಂದೆಯೇ ಸತ್ತನು.
Kannada BSI Bible 2016
ಆದರೆ ಹಾರಾನನು ತಾನು ಹುಟ್ಟಿದ ಸೀಮೆಯಾದ ಕಲ್ದಿಯರ ಊರ್‌ನಲ್ಲಿ ತನ್ನ ತಂದೆಯಾದ ತೆರಹನ ಮುಂಚೆಯೇ ಸತ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾರಾನನು ಲೋಟನನ್ನು ಪಡೆದನು. ಹಾರಾನನು ತಾನು ಹುಟ್ಟಿದ ದೇಶದೊಳಗೆ ಕಲ್ದೀಯರ ಊರ್ ಎಂಬ ಪಟ್ಟಣದಲ್ಲಿ ತನ್ನ ತಂದೆಯಾದ ತೆರಹನ ಹತ್ತಿರವೇ ಸತ್ತನು.
Kannada Bible (KNCL) BSI 2016
ಹಾರಾನನು, ತನ್ನ ಜನ್ಮಭೂಮಿಯಲ್ಲಿ, ಬಾಬಿಲೋನಿನ ಊರ್ ಎಂಬ ಪಟ್ಟಣದಲ್ಲಿ, ತನ್ನ ತಂದೆಯಾದ ತೆರಹನು ಜೀವದಿಂದಿರುವಾಗಲೇ ಸತ್ತನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಹಾರಾನನು ತಾನು ಹುಟ್ಟಿದ ಸೀಮೆಯಾದ ಕಸ್ದೀಯರ ಊರ್ ಎಂಬ ಪಟ್ಟಣದಲ್ಲಿ ತನ್ನ ತಂದೆ ತೆರಹನಿಗಿಂತ ಮೊದಲು ಸತ್ತನು.