Genesis 11:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಒಬ್ಬರಿಗೊಬ್ಬರು ಮಾತಾಡುತ್ತಾ, “ಬನ್ನಿ, ಒಳ್ಳೆಯ ಸುಟ್ಟ ಇಟ್ಟಿಗೆಗಳನ್ನು ಮಾಡೋಣ” ಎಂದು ನಿರ್ಧರಿಸಿದರು. ಅವರು ತಮ್ಮ ಮನೆಗಳನ್ನು ಕಟ್ಟಲು ಕಲ್ಲುಗಳ ಬದಲಾಗಿ ಇಟ್ಟಿಗೆಗಳನ್ನೂ ಗಾರೆಗೆ ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅವರೆಲ್ಲರೂ ಬನ್ನಿ, ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು.
Kannada BSI Bible 2016
ಅವರು--ಬನ್ನಿರಿ, ಇಟ್ಟಿಗೆ ಗಳನ್ನು ಮಾಡಿ ಚೆನ್ನಾಗಿ ಸುಡೋಣ ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರಿಗೆ ಕಲ್ಲಿಗೆ ಬದಲಾಗಿ ಇಟ್ಟಿಗೆಯೂ ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣೂ ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬನ್ನಿ, ಒಳ್ಳೊಳ್ಳೇ ಸುಟ್ಟ ಇಟ್ಟಿಗೆಗಳನ್ನು ಮಾಡೋಣ;
Kannada Bible (KNCL) BSI 2016
“ಬನ್ನಿ, ಒಳ್ಳೊಳ್ಳೆ ಸುಟ್ಟ ಇಟ್ಟಿಗೆಗಳನ್ನು ಮಾಡೋಣ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಅವರು, “ಬನ್ನಿರಿ ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು.