Genesis 11:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತೆರಹನು ತನ್ನ ಕುಟುಂಬವನ್ನು ಕರೆದುಕೊಂಡು ಬಾಬಿಲೋನಿನ ಊರ್ ಎಂಬ ಸ್ವಂತ ಸ್ಥಳದಿಂದ ಹೊರಟು ಕಾನಾನಿಗೆ ಪ್ರಯಾಣ ಮಾಡಿದನು. ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ ಮತ್ತು ತನಗೆ ಸೊಸೆಯೂ ಅಬ್ರಾಮನ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಹಾರಾನ್ ಪಟ್ಟಣಕ್ಕೆ ಹೋಗಿ ಅಲ್ಲೇ ವಾಸಿಸಲು ತೀರ್ಮಾನಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತೆರಹನು ತನ್ನ ಮಗನಾದ ಅಬ್ರಾಮನನ್ನೂ, ತನಗೆ ಮೊಮ್ಮಗನೂ, ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ, ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟು ಅವರು ಹಾರಾನ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು.
Kannada BSI Bible 2016
ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನ ಮಗನೂ ಆಗಿದ್ದ ಲೋಟನನ್ನೂ ತನ್ನ ಸೊಸೆಯಾದ ಅಬ್ರಾಮನ ಹೆಂಡತಿ ಸಾರಯಳನ್ನೂ ಕರಕೊಂಡು ಕಾನಾನ್‌ ದೇಶಕ್ಕೆ ಹೋಗು ವದಕ್ಕಾಗಿ ಕಲ್ದೀಯರ ಊರ್‌ ಅನ್ನು ಬಿಟ್ಟು ಅವರು ಹಾರಾನಿಗೆ ಬಂದು ಅಲ್ಲಿ ವಾಸವಾಗಿದ್ದರು.ತೆರಹನ ದಿನಗಳು ಒಟ್ಟು ಇನ್ನೂರ ಐದು ವರುಷಗಳಾಗಿದ್ದವು. ತರುವಾಯ ತೆರಹನು ಹಾರಾನಿನಲ್ಲಿ ಸತ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನಗೆ ಮೊಮ್ಮಗನೂ ಹಾರಾನನಿಗೂ ಮಗನೂ ಆಗಿರುವ ಲೋಟನನ್ನೂ ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರಕೊಂಡು ಕಾನಾನ್‍ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟನು. ಅವರು ಹಾರಾನ್ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು.
Kannada Bible (KNCL) BSI 2016
ತೆರಹನು ತನ್ನ ಮಗನಾದ ಅಬ್ರಾಮನನ್ನು ಮತ್ತು ತನಗೆ ಮೊಮ್ಮಗನೂ ಹಾರಾನನಿಗೆ ಮಗನೂ ಆದ ಲೋಟನನ್ನೂ ಹಾಗು ತನಗೆ ಸೊಸಯೂ ಅಬ್ರಾಮನಿಗೆ ಹೆಂಡತಿಯೂ ಆದ ಸಾರಯಳನ್ನೂ ಕರೆದುಕೊಂಡು ಬಾಬಿಲೋನಿನ ಊರ್ ಎಂಬ ಪಟ್ಟಣವನ್ನು ಬಿಟ್ಟು ಕಾನಾನ್ ನಾಡಿಗೆ ತೆರಳಿದನು. ಅವರು ಹಾರಾನ್ ಎಂಬ ಪಟ್ಟಣವನ್ನು ತಲುಪಿ ಅಲ್ಲಿ ವಾಸಮಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತೆರಹನು ತನ್ನ ಮಗನಾದ ಅಬ್ರಾಮನನ್ನು ಮತ್ತು ತನಗೆ ಮೊಮ್ಮಗನೂ ಹಾರಾನನಿಗೆ ಮಗನೂ ಆದ ಲೋಟನನ್ನೂ ಹಾಗೂ ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆದ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗುವುದಕ್ಕಾಗಿ ಕಸ್ದೀಯರ ಊರ್ ಪಟ್ಟಣವನ್ನು ಬಿಟ್ಟು, ಹಾರಾನ್ ಎಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸವಾಗಿದ್ದನು.