Genesis 11:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು, “ಈ ಜನರೆಲ್ಲರು ಒಂದೇ ಭಾಷೆಯನ್ನು ಮಾತಾಡುವುದರಿಂದ ಒಟ್ಟಾಗಿ ಸೇರಿಕೊಂಡಿದ್ದಾರೆ. ಪ್ರಾರಂಭದಲ್ಲೇ ಇಂಥ ಕಾರ್ಯವನ್ನು ಮಾಡುತ್ತಿರುವ ಇವರು ಮುಂದೆ ಏನು ಬೇಕಾದರೂ ಮಾಡಲು ಶಕ್ತರಾಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೋಡಿದ ಮೇಲೆ ಯೆಹೋವನು, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ.
Kannada BSI Bible 2016
ಕರ್ತನು--ಇಗೋ, ಜನವು ಒಂದೇ; ಅವರೆಲ್ಲರಿಗೆ ಭಾಷೆಯೂ ಒಂದೇ. ಈಗ ಅವರು ಇದನ್ನು ಮಾಡಲಾರಂಭಿಸಿದ್ದಾರೆ; ಇನ್ನು ಮುಂದೆ ಅವರು ಮಾಡುವದಕ್ಕೂ ಊಹಿಸುವದಕ್ಕೂ ಅಡ್ಡಿ ಯಾಗದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೋಡಿದ ಮೇಲೆ ಆತನು - ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇಷ್ಟು ದೊಡ್ಡ ಕೆಲಸ ಮಾಡುವವರಾಗಿರಲು ಮುಂದೆ ಏನು ಆಲೋಚಿಸಿದರೂ ಇವರಿಗೆ ಅಸಾಧ್ಯವಲ್ಲ.
Kannada Bible (KNCL) BSI 2016
ನೋಡಿದ ಮೇಲೆ, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಇದು ಇವರು ಕೈಗೊಂಡಿರುವ ಕಾರ್ಯದ ಪ್ರಾರಂಭ ಮಾತ್ರ. ಮುಂದಕ್ಕೆ ಇವರು ಏನು ಬೇಕಾದರೂ ಮಾಡಿಯಾರು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು, “ಇವರಿಗೆ ಒಂದೇ ಜನಾಂಗವೂ ಒಂದೇ ಭಾಷೆಯೂ ಇದೆ. ಇವರು ಇದನ್ನು ಮಾಡಲಾರಂಭಿಸಿದ್ದಾರೆ. ಈಗ ಇನ್ನು ಮುಂದೆ ಇವರು ಮಾಡುವುದಕ್ಕೆ ಉದ್ದೇಶಿಸುವುದು ಇವರಿಗೆ ಅಸಾಧ್ಯವಾಗುವುದಿಲ್ಲ.