Genesis 11:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಇಡೀ ಲೋಕದ ಭಾಷೆಯನ್ನು ತಾರುಮಾರು ಮಾಡಿದ್ದು ಆ ಸ್ಥಳದಲ್ಲೇ. ಆದ್ದರಿಂದ ಆ ಸ್ಥಳಕ್ಕೆ ಬಾಬಿಲೋನ್ ಎಂದು ಹೆಸರಾಯಿತು. ಹೀಗೆ ಯೆಹೋವನು ಜನರನ್ನು ಆ ಸ್ಥಳದಿಂದ ಭೂಮಿಯಲ್ಲೆಲ್ಲಾ ಚದರಿಸಿಬಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು.
Kannada BSI Bible 2016
ಆದದರಿಂದ ಅದಕ್ಕೆ ಬಾಬೆಲ್ ಎಂದು ಹೆಸರಾಯಿತು; ಯಾಕಂದರೆ ಅಲ್ಲಿ ಕರ್ತನು ಭೂಮಿಯ ಮೇಲೆಲ್ಲಾ ಭಾಷೆಗಳನ್ನು ಗಲಿಬಿಲಿ ಮಾಡಿದನು; ಅಲ್ಲಿಂದ ಕರ್ತನು ಅವರನ್ನು ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮಸ್ತಲೋಕದ ಭಾಷೆಯನ್ನು ಯೆಹೋವನು ಅಲ್ಲಿ ತಾರುಮಾರುಮಾಡಿ ಅವರನ್ನು ಅಲ್ಲಿಂದ ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ ಎಂಬ ಹೆಸರಾಯಿತು.
Kannada Bible (KNCL) BSI 2016
ಹೀಗೆ ಸರ್ವೇಶ್ವರ ಇಡೀ ಜಗತ್ತಿನ ಭಾಷೆಯನ್ನು ಗಲಿಬಿಲಿಗೊಳಿಸಿ ಅಲ್ಲಿಂದ ಜನರನ್ನು ಜಗದೆಲ್ಲೆಡೆಗೆ ಚದರಿಸಿದ ಕಾರಣ ಆ ಪಟ್ಟಣಕ್ಕೆ ‘ಬಾಬೆಲೋನ್’ ಎಂದು ಹೆಸರಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ಅದಕ್ಕೆ, ಬಾಬೆಲ್ ಎಂದು ಹೆಸರಾಯಿತು. ಏಕೆಂದರೆ ಅಲ್ಲಿ ಯೆಹೋವ ದೇವರು ಇಡೀ ಜಗತ್ತಿನ ಭಾಷೆಗಳನ್ನು ಗಲಿಬಿಲಿ ಮಾಡಿದರು. ಅಲ್ಲಿಂದ ಯೆಹೋವ ದೇವರು ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿಬಿಟ್ಟರು.
Recommended Reading