Genesis 12:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಕಾಲದಲ್ಲಿ ಭೂಮಿಯು ಒಣಗಿಹೋಗಿತ್ತು; ಮಳೆ ಇರಲಿಲ್ಲ. ಅಲ್ಲಿ ಆಹಾರವನ್ನು ಬೆಳೆಯಲು ಸಾಧ್ಯವಿರಲಿಲ್ಲ. ಆದ್ದರಿಂದ ಅಬ್ರಾಮನು ವಾಸಿಸುವುದಕ್ಕಾಗಿ ಈಜಿಪ್ಟಿಗೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಕ್ಷಿಣ ಕಾನಾನ್ ದೇಶದಲ್ಲಿ ಘೋರ ಕ್ಷಾಮವಿದ್ದುದರಿಂದ, ಅಬ್ರಾಮನು ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದು ಹೋದನು.
Kannada BSI Bible 2016
ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ ಅಬ್ರಾಮನು ಐಗುಪ್ತದಲ್ಲಿ ಪ್ರವಾಸಿಯಾಗಿರುವದಕ್ಕೆ ಇಳಿದು ಹೋದನು. ಯಾಕಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದೇಶದಲ್ಲಿ ಘೋರ ಕ್ಷಾಮವಿದ್ದದರಿಂದ ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದುಹೋದನು.
Kannada Bible (KNCL) BSI 2016
ಕಾನಾನ್ ನಾಡಿನಲ್ಲಿ ಕ್ಷಾಮ ತಲೆದೋರಿತು. ಅದು ಘೋರವಾಗಿದ್ದುದರಿಂದ ಅಬ್ರಾಮನು ಕೆಲವು ಕಾಲ ಈಜಿಪ್ಟಿನಲ್ಲಿರಲು ಅಲ್ಲಿಗೆ ಇಳಿದುಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ, ಅಬ್ರಾಮನು ಈಜಿಪ್ಟಿನಲ್ಲಿ ಕೆಲವು ಸಮಯ ಇರಲು ಇಳಿದು ಹೋದನು. ಏಕೆಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.