Genesis 12:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನೀನು ನನಗೆ ತಂಗಿಯಾಗಬೇಕೆಂದು ಜನರಿಗೆ ಹೇಳು. ಆಗ ಅವರು ನನ್ನನ್ನು ನಿನ್ನ ಸಹೋದರನೆಂದು ಭಾವಿಸಿ ನನ್ನನ್ನು ಕೊಲ್ಲದೆ ನನಗೆ ದಯೆತೋರುವರು. ಹೀಗೆ ನೀನು ನನ್ನ ಪ್ರಾಣ ಉಳಿಸುವೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ನೀನು ನನಗೆ ತಂಗಿಯಾಗಬೇಕೆಂದು ಅವರಿಗೆ ಹೇಳು; ಹೀಗೆ ಹೇಳಿದರೆ ನಿನ್ನ ನಿಮಿತ್ತ ನನಗೆ ಹಿತವಾಗುವುದು, ನಾನು ನಿನ್ನ ದೆಸೆಯಿಂದ ಸಾಯದೆ ಬದುಕುವೆನು” ಎಂದು ಹೇಳಿದನು.
Kannada BSI Bible 2016
ನಿನ್ನ ದೆಸೆಯಿಂದ ನನಗೆ ಒಳ್ಳೆಯದಾಗಿ ನನ್ನ ಪ್ರಾಣವು ಉಳಿಯುವಂತೆ ನೀನು ನನ್ನ ಸಹೋದರಿ ಎಂದು ಹೇಳಬೇಕು ಎಂದು ಕೇಳಿಕೊಳ್ಳುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನೀನು ನನಗೆ ತಂಗಿಯಾಗಬೇಕೆಂದು ಅವರಿಗೆ ಹೇಳು; ಹೀಗೆ ಹೇಳಿದರೆ ನಿನ್ನ ನಿವಿುತ್ತ ನನಗೆ ಹಿತವಾಗುವದು, ನಾನು ನಿನ್ನ ದೆಸೆಯಿಂದ ಸಾಯದೆ ಬದುಕುವೆನು ಎಂದು ಹೇಳಿದನು.
Kannada Bible (KNCL) BSI 2016
ಆದಕಾರಣ ನೀನು ನನಗೆ ತಂಗಿಯೆಂದೇ ಅವರಿಗೆ ಹೇಳು. ಆಗ ನಿನ್ನ ನಿಮಿತ್ತ ನನಗೆ ಸತ್ಕಾರ ದೊರಕುವುದು; ನಿನ್ನ ದೆಸೆಯಿಂದ ನನ್ನ ಪ್ರಾಣ ಉಳಿಯುವುದು,” ಎಂದು ತಿಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ದೆಸೆಯಿಂದ ನನಗೆ ಒಳ್ಳೆಯದಾಗಿ, ನನ್ನ ಪ್ರಾಣವು ಉಳಿಯುವಂತೆ ನೀನು ನನ್ನ ಸಹೋದರಿ ಎಂದು ದಯಮಾಡಿ ಹೇಳಬೇಕು,” ಎಂದು ಹೇಳಿದನು.