Genesis 12:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಜಿಪ್ಟಿನ ಕೆಲವು ನಾಯಕರು ಸಹ ಆಕೆಯನ್ನು ಕಂಡರು. ಅವರು ಫರೋಹನ ಬಳಿಗೆ ಹೋಗಿ ಆಕೆಯ ಅಮೋಘ ಸೌಂದರ್ಯವನ್ನು ತಿಳಿಸಿದರು. ಬಳಿಕ ಆ ನಾಯಕರು ಸಾರಯಳನ್ನು ಫರೋಹನ ಬಳಿಗೆ ಕರೆದೊಯ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫರೋಹನ ರಾಜಕುಮಾರರು ಆಕೆಯನ್ನು ನೋಡಿ ಬಂದು, ಅವನ ಮುಂದೆ ಹೊಗಳಲಾಗಿ ಫರೋಹನು ಆ ಸ್ತ್ರೀಯನ್ನು ಅರಮನೆಗೆ ಕರೆಯಿಸಿ ಆಕೆಯ ನಿಮಿತ್ತ ಅಬ್ರಾಮನಿಗೆ ಉಪಕಾರ ಮಾಡಿದನು.
Kannada BSI Bible 2016
ಫರೋಹನ ಪ್ರಧಾ ನರು ಸಹ ಆಕೆಯನ್ನು ನೋಡಿ ಫರೋಹನ ಮುಂದೆ ಆಕೆಯನ್ನು ಹೊಗಳಲಾಗಿ ಆ ಸ್ತ್ರೀಯು ಫರೋಹನ ಮನೆಗೆ ಒಯ್ಯಲ್ಪಟ್ಟಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫರೋಹನ ಪ್ರಧಾನರು ಆಕೆಯನ್ನು ನೋಡಿ ಬಂದು ಅವನ ಮುಂದೆ ಹೊಗಳಲಾಗಿ
Kannada Bible (KNCL) BSI 2016
ಫರೋಹನ ಪದಾಧಿಕಾರಿಗಳು ಆಕೆಯನ್ನು ನೋಡಿಬಂದು ಆಕೆಯ ಚೆಲುವನ್ನು ಅವನ ಮುಂದೆ ಹೊಗಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫರೋಹನ ಅಧಿಕಾರಿಗಳು ಆಕೆಯನ್ನು ನೋಡಿ, ಫರೋಹನ ಮುಂದೆ ಆಕೆಯನ್ನು ಹೊಗಳಿ, ಆ ಸ್ತ್ರೀಯನ್ನು ಅವನ ಅರಮನೆಗೆ ಕರೆದುಕೊಂಡು ಹೋದರು.