Genesis 12:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ರಾಮನು ಸಾರಯಳ ಸಹೋದರನೆಂದು ಭಾವಿಸಿ ಫರೋಹನು ಅಬ್ರಾಮನಿಗೆ ದಯೆತೋರಿದನು. ಫರೋಹನು ಅಬ್ರಾಮನಿಗೆ ದನಕುರಿಗಳನ್ನೂ ಕತ್ತೆಗಳನ್ನೂ ಕೊಟ್ಟನು. ಅಲ್ಲದೆ ಅಬ್ರಾಮನಿಗೆ ದಾಸದಾಸಿಯರನ್ನೂ ಒಂಟೆಗಳನ್ನೂ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅಬ್ರಾಮನಿಗೆ ಕುರಿ, ಎತ್ತು, ಗಂಡು, ಹೆಣ್ಣು ಕತ್ತೆಗಳು, ದಾಸದಾಸಿಯರು, ಒಂಟೆಗಳು, ದೊರಕಿದವು.
Kannada BSI Bible 2016
ಅವನು ಆಕೆಗೋಸ್ಕರ ಅಬ್ರಾಮನಿಗೆ ಒಳ್ಳೇದನ್ನು ಮಾಡಿದನು. ಅವನಿಗೆ ಕುರಿಗಳೂ ಎತ್ತುಗಳೂ ಕತ್ತೆಗಳೂ ದಾಸರೂ ದಾಸಿ ಯರೂ ಹೆಣ್ಣುಕತ್ತೆಗಳೂ ಒಂಟೆಗಳೂ ದೊರೆತವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫರೋಹನು ಆ ಸ್ತ್ರೀಯನ್ನು ಅರಮನೆಗೆ ಕರತರಿಸಿ ಆಕೆಯ ನಿವಿುತ್ತ ಅಬ್ರಾಮನಿಗೆ ಉಪಕಾರ ಮಾಡಿದನು. ಆಗ ಅಬ್ರಾಮನಿಗೆ ಕುರಿದನಗಳೂ ಗಂಡು ಹೆಣ್ಣು ಕತ್ತೆಗಳೂ ದಾಸದಾಸಿಯರೂ ಒಂಟೆಗಳೂ ದೊರೆತವು.
Kannada Bible (KNCL) BSI 2016
ಅವನು ಆಕೆಯನ್ನು ಅರಮನೆಗೆ ಕರೆಸಿದನು. ಆಕೆಯ ನಿಮಿತ್ತ ಅಬ್ರಾಮನಿಗೆ ಸತ್ಕಾರ ದೊರಕಿತು; ಕುರಿಮೇಕೆಗಳು, ದನಕರುಗಳು, ಗಂಡುಹೆಣ್ಣು ಕತ್ತೆಗಳು, ದಾಸದಾಸಿಯರು ಹಾಗು ಒಂಟೆಗಳು ದೊರೆತವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಆಕೆಗೋಸ್ಕರ ಅಬ್ರಾಮನಿಗೆ ಒಳ್ಳೆಯದನ್ನು ಮಾಡಿದನು. ಅವನಿಗೆ ಕುರಿ, ಎತ್ತು, ಕತ್ತೆಗಳೂ ದಾಸದಾಸಿಯರೂ ಹೆಣ್ಣು ಕತ್ತೆಗಳೂ ಒಂಟೆಗಳೂ ದೊರೆತವು.