Genesis 12:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ಈಕೆ ನನಗೆ ತಂಗಿಯಾಗಬೇಕು’ ಎಂದು ಯಾಕೆ ಹೇಳಿದೆ? ನೀನು ಹೀಗೆ ಹೇಳಿದ್ದರಿಂದ ನಾನು ಆಕೆಯನ್ನು ನನ್ನ ಹೆಂಡತಿಯಾಗಲಿಕ್ಕೆ ತೆಗೆದುಕೊಂಡೆ. ಆದರೆ ಈಗ ನಾನು ನಿನ್ನ ಹೆಂಡತಿಯನ್ನು ಮತ್ತೆ ನಿನಗೇ ಕೊಡುತ್ತೇನೆ. ನೀನು ಆಕೆಯನ್ನು ನಿನ್ನೊಂದಿಗೆ ಕರೆದುಕೊಂಡು ಹೊರಟುಹೋಗು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಂಗಿಯೆಂದು ಯಾಕೆ ಹೇಳಿದೆ? ಹೀಗೆ ಹೇಳಿದ್ದರಿಂದ ಆಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡೆನಲ್ಲಾ. ಇಗೋ ನಿನ್ನ ಹೆಂಡತಿ; ಕರೆದುಕೊಂಡು ಹೋಗು” ಎಂದು ಹೇಳಿ,
Kannada BSI Bible 2016
ನೀನು--ಆಕೆಯು ನನ್ನ ಸಹೋ ದರಿ ಎಂದು ಯಾಕೆ ಹೇಳಿದೆ? ನೀನು ಹಾಗೆ ಹೇಳಿದ್ದರಿಂದ ಆಕೆಯನ್ನು ನನಗೆ ಹೆಂಡತಿಯಾಗಿ ಇಟ್ಟುಕೊಳ್ಳುವದಕ್ಕಿದ್ದೆನು. ಆದರೆ ಈಗ ಇಗೋ, ನಿನ್ನ ಹೆಂಡತಿ; ಆಕೆಯನ್ನು ತೆಗೆದುಕೊಂಡು ಹೋಗು ಅಂದನು.ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಅಪ್ಪಣೆಕೊಟ್ಟು ಅವರು ಅವನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಕಳುಹಿಸಿಬಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಂಗಿಯೆಂದು ಯಾಕೆ ಹೇಳಿದೆ? ಹೀಗೆ ಹೇಳಿದ್ದರಿಂದ ಆಕೆಯನ್ನು ಹೆಂಡತಿಯಾಗಲಿಕ್ಕೆ ತೆಗೆದುಕೊಂಡೆನಲ್ಲಾ. ಇಗೋ ನಿನ್ನ ಹೆಂಡತಿ; ಕರೆದುಕೊಂಡು ಹೋಗು ಎಂದು ಹೇಳಿ
Kannada Bible (KNCL) BSI 2016
ಆಕೆ ನಿನ್ನ ಹೆಂಡತಿಯೆಂದು ನನಗೇಕೆ ತಿಳಿಸಲಿಲ್ಲ? ತಂಗಿಯೆಂದು ಏಕೆ ಹೇಳಿದೆ? ಹಾಗೆ ಹೇಳಿದ್ದರಿಂದಲೆ ಆಕೆ ನನಗೆ ಹೆಂಡತಿಯಾಗಲೆಂದು ಕರೆಸಿಕೊಂಡೆ. ಇಗೋ ನಿನ್ನ ಹೆಂಡತಿ! ಕರೆದುಕೊಂಡು ಇಲ್ಲಿಂದ ತೆರಳು,” ಎಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಆಕೆಯು ನನ್ನ ಸಹೋದರಿ,’ ಎಂದು ಯಾಕೆ ಹೇಳಿದೆ? ನೀನು ಹಾಗೆ ಹೇಳಿದ್ದರಿಂದ ಆಕೆಯನ್ನು ನನಗೆ ಹೆಂಡತಿಯಾಗಿ ಇಟ್ಟುಕೊಳ್ಳುವುದರಲ್ಲಿದ್ದೆನು. ಆದರೆ ಈಗ, ನಿನ್ನ ಹೆಂಡತಿ, ಈಕೆಯನ್ನು ನೀನು ಕರೆದುಕೊಂಡು ಹೋಗು,” ಎಂದನು.