Genesis 12:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ಫರೋಹನು ತನ್ನ ಜನರಿಗೆ ಅಬ್ರಾಮನನ್ನು ಈಜಿಪ್ಟಿನಿಂದ ಕಳುಹಿಸಿಕೊಡಬೇಕೆಂದು ಆಜ್ಞಾಪಿಸಿದನು. ಆದ್ದರಿಂದ ಅಬ್ರಾಮನು ಮತ್ತು ಅವನ ಹೆಂಡತಿ ಆ ಸ್ಥಳದಿಂದ ಹೊರಟುಹೋದರು; ಅವರು ತಮ್ಮೊಡನೆ ಇದ್ದವುಗಳನ್ನೆಲ್ಲ ತೆಗೆದುಕೊಂಡು ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫರೋಹನು ಅವನ ವಿಷಯವಾಗಿ ತನ್ನ ಸೇವಕರಿಗೆ ಅಪ್ಪಣೆಕೊಡಲು ಅವರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಒಟ್ಟಿಗೆ ಸೇರಿಸಿ ಕಳುಹಿಸಿ ಬಿಟ್ಟರು.
Kannada BSI Bible 2016
ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಅಪ್ಪಣೆಕೊಟ್ಟು ಅವರು ಅವನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಕಳುಹಿಸಿಬಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ವಿಷಯವಾಗಿ ತನ್ನ ಸೇವಕರಿಗೆ ಅಪ್ಪಣೆಕೊಡಲು ಅವರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗಿದ್ದ ಸರ್ವಸ್ವಸಹಿತವಾಗಿ ಸಾಗಕಳುಹಿಸಿದರು.
Kannada Bible (KNCL) BSI 2016
ಅವನ ಅಪ್ಪಣೆ ಪಡೆದ ಸೇವಕರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗಿದ್ದ ಎಲ್ಲದರ ಸಮೇತ ಅಲ್ಲಿಂದ ಕಳಿಸಿಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಆಜ್ಞಾಪಿಸಲು, ಅವರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗಿದ್ದ ಎಲ್ಲದರ ಸಮೇತ ಅಲ್ಲಿಂದ ಕಳುಹಿಸಿಬಿಟ್ಟನು.