Genesis 12:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನಗೆ ಒಳ್ಳೆಯದನ್ನು ಮಾಡುವವರನ್ನು ಆಶೀರ್ವದಿಸುವೆನು; ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ನಿನ್ನ ನಿಮಿತ್ತವಾಗಿ ಲೋಕದವರೆಲ್ಲರೂ ಆಶೀರ್ವಾದ ಹೊಂದುವರು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.
Kannada BSI Bible 2016
ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಆಶೀರ್ವಾದನಿಧಿಯಾಗುವಿ. ನಿನ್ನನ್ನು ಹರಸುವವರನ್ನು ಹರಸುವೆನು; ನಿನ್ನನ್ನು ಶಪಿಸುವವರನ್ನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು ಎಂದು ಹೇಳಿದನು.
Kannada Bible (KNCL) BSI 2016
\ನಿನ್ನನ್ನು ಹರಸುವವರನು ನಾ ಹರಸುವೆ, ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು. ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.”