Genesis 12:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಅಬ್ರಾಮನು ಯೆಹೋವನಿಗೆ ವಿಧೇಯನಾದನು. ಅವನು ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟನು. ಅವನೊಡನೆ ಲೋಟನು ಸಹ ಹೋದನು. ಆಗ ಅಬ್ರಾಮನಿಗೆ ಎಪ್ಪತ್ತೈದು ವರ್ಷ ವಯಸ್ಸಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಎಪ್ಪತ್ತೈದು ವರ್ಷದವನಾಗಿದ್ದನು.
Kannada BSI Bible 2016
ಹೀಗೆ ಕರ್ತನು ತನಗೆ ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನಿ ನಿಂದ ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಹೇಳಿದ ಮೇರೆಗೆ ಅಬ್ರಾಮನು ಹೊರಟುಹೋದನು; ಲೋಟನೂ ಸಂಗಡ ಹೋದನು. ಅಬ್ರಾಮನು ಖಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು.
Kannada Bible (KNCL) BSI 2016
ಸರ್ವೇಶ್ವರ ಹೀಗೆಂದು ಹೇಳಿದ ಮೇಲೆ ಅಬ್ರಾಮನು ಹೊರಟನು. ಲೋಟನು ಅವನ ಸಂಗಡವೆ ಹೋದನು. ಆ ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಅಬ್ರಾಮನಿಗೆ ಎಪ್ಪತ್ತೈದು ವರ್ಷಗಳಾಗಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯೆಹೋವ ದೇವರು ತನಗೆ ಹೇಳಿದ ಪ್ರಕಾರ, ಅಬ್ರಾಮನು ಹೊರಟುಹೋದನು. ಲೋಟನು ಅವನೊಂದಿಗೆ ಹೋದನು. ಅಬ್ರಾಮನು ಹಾರಾನಿನಿಂದ ಹೊರಟಾಗ ಎಪ್ಪತ್ತೈದು ವರ್ಷದವನಾಗಿದ್ದನು.