Genesis 12:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಒಬ್ಬಂಟಿಗನಾಗಿ ಹೋಗಲಿಲ್ಲ. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ತಮ್ಮನ ಮಗನಾದ ಲೋಟನನ್ನೂ ತನ್ನೊಂದಿಗೆ ಕರೆದುಕೊಂಡು ಹೋದನು. ಹಾರಾನ್ ಪಟ್ಟಣದಲ್ಲಿ ತಮಗಿದ್ದ ಸ್ವತ್ತುಗಳನ್ನೆಲ್ಲ ಅವರು ತೆಗೆದುಕೊಂಡು ಹೋದರು. ಅಬ್ರಾಮನು ಹಾರಾನ್ ಪಟ್ಟಣದಲ್ಲಿ ಹೊಂದಿದ್ದ ಸೇವಕರು ಸಹ ಅವನೊಡನೆ ಹೋದರು. ಅಬ್ರಾಮನು ಮತ್ತು ಅವನ ಸಂಗಡಿಗರು ಹಾರಾನ್ ಪಟ್ಟಣವನ್ನು ಬಿಟ್ಟು ಕಾನಾನ್ ದೇಶಕ್ಕೆ ಪ್ರಯಾಣಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ತಮ್ಮನ ಮಗನಾದ ಲೋಟನನ್ನೂ, ತಾನೂ ಲೋಟನೂ ಹಾರಾನಿನಲ್ಲಿ ಸಂಪಾದಿಸಿದ್ದ ಎಲ್ಲಾ ಸೊತ್ತನ್ನೂ, ದಾಸ ದಾಸಿಯರನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ಬಂದನು.
Kannada BSI Bible 2016
ಇದಲ್ಲದೆ ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ಸಹೋದರನ ಮಗನಾದ ಲೋಟ ನನ್ನೂ ಅವರು ಕೂಡಿಸಿಕೊಂಡಿದ್ದ ಎಲ್ಲಾ ಸಂಪತ್ತನ್ನೂ ಹಾರಾನಿನಲ್ಲಿ ಅವರು ಸಂಪಾದಿಸಿಕೊಂಡವರನ್ನೂ ತಮ್ಮ ಸಂಗಡ ಕರಕೊಂಡು ಕಾನಾನ್ ದೇಶಕ್ಕೆ ಹೊರಟು ಅವರು ಕಾನಾನ್ ದೇಶಕ್ಕೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ತಮ್ಮನ ಮಗನಾದ ಲೋಟನನ್ನೂ ತಾನೂ ಲೋಟನೂ ಖಾರಾನಿನಲ್ಲಿ ಸಂಪಾದಿಸಿದ್ದ ಎಲ್ಲಾ ಸೊತ್ತನ್ನೂ ದಾಸದಾಸಿಯರನ್ನೂ ತೆಗೆದುಕೊಂಡು ಹೋಗಿ ಕಾನಾನ್ ದೇಶಕ್ಕೆ ಸೇರಿದನು.
Kannada Bible (KNCL) BSI 2016
ತನ್ನ ಹೆಂಡತಿ ಸಾರಯಳನ್ನು, ತನ್ನ ತಮ್ಮನ ಮಗನಾದ ಲೋಟನನ್ನು, ತಾನು ಮತ್ತು ಲೋಟನು ಹಾರಾನಿನಲ್ಲಿ ಗಳಿಸಿದ ಆಸ್ತಿಪಾಸ್ತಿಯನ್ನು ಹಾಗು ದಾಸದಾಸಿಯರನ್ನು ತೆಗೆದುಕೊಂಡು ಹೋಗಿ ಕಾನಾನ್ ನಾಡನ್ನು ಸೇರಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ಸಹೋದರನ ಮಗ ಲೋಟನನ್ನೂ, ತಾವು ಕೂಡಿಸಿಕೊಂಡಿದ್ದ ಎಲ್ಲಾ ಆಸ್ತಿಯನ್ನೂ, ಹಾರಾನಿನಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಜನರನ್ನೂ ತಮ್ಮ ಸಂಗಡ ಕರೆದುಕೊಂಡು ಕಾನಾನ್ ದೇಶಕ್ಕೆ ಸೇರಿದನು.