Genesis 12:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬ್ರಾಮನು ಕಾನಾನ್ ದೇಶದಲ್ಲಿ ಪ್ರಯಾಣವನ್ನು ಮುಂದುವರಿಸಿದನು. ಅವನು ಶೆಕೆಮ್ ನಗರವನ್ನು ತಲುಪಿ, ಅಲ್ಲಿಂದ ಮೋರೆ ಎಂಬ ದೊಡ್ಡ ಓಕ್ ಮರವಿದ್ದ ಸ್ಥಳಕ್ಕೆ ಬಂದನು. ಆ ಕಾಲದಲ್ಲಿ ಕಾನಾನ್ಯರು ಆ ದೇಶದಲ್ಲಿ ವಾಸವಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಸ್ಥಳದಲ್ಲಿರುವ ಮೋರೆ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು.
Kannada BSI Bible 2016
ಅಬ್ರಾಮನು ಆ ದೇಶದಲ್ಲಿ ಶೆಕೆಮ್‌ ಎಂಬ ಸ್ಥಳದ ಮೋರೆಯೆಂಬ ಮೈದಾನದ ವರೆಗೆ ಹಾದು ಹೋದನು. ಆಗ ಕಾನಾನ್ಯರು ದೇಶದಲ್ಲಿ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಕ್ಷೇತ್ರದಲ್ಲಿರುವ ಮೋರೆಯೆಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು.
Kannada Bible (KNCL) BSI 2016
ಆ ನಾಡಿನಲ್ಲಿ ಸಂಚರಿಸುತ್ತಾ ಅಬ್ರಾಮನು ಶೆಕೆಮ್ ಪುಣ್ಯಕ್ಷೇತ್ರದಲ್ಲಿರುವ ‘ಮೋರೆ’ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ಆ ನಾಡಿನಲ್ಲಿ ವಾಸವಾಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ರಾಮನು ಆ ದೇಶದಲ್ಲಿ ಶೆಕೆಮ್ ಎಂಬ ಸ್ಥಳದ ಮೋರೆ ಎಂಬ ಮಹಾವೃಕ್ಷದವರೆಗೆ ಪ್ರಯಾಣಮಾಡಿದನು. ಆಗ ಕಾನಾನ್ಯರು ಆ ದೇಶದಲ್ಲಿ ಇದ್ದರು.