Genesis 12:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ಅಬ್ರಾಮನು ಆ ಸ್ಥಳದಿಂದ ಹೊರಟು ಬೇತೇಲಿಗೆ ಪೂರ್ವದಲ್ಲಿರುವ ಗುಡ್ಡಗಳ ಬಳಿಗೆ ಪ್ರಯಾಣ ಮಾಡಿದನು. ಅಲ್ಲಿ ಅಬ್ರಾಮನು ತನ್ನ ಗುಡಾರಗಳನ್ನು ಹಾಕಿದನು. ಪಶ್ಚಿಮಕ್ಕೆ ಬೇತೇಲ್ ಪಟ್ಟಣವಿತ್ತು, ಪೂರ್ವಕ್ಕೆ ಆಯಿ ಪಟ್ಟಣವಿತ್ತು. ಆ ಸ್ಥಳದಲ್ಲಿ ಅವನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಕೆಯನ್ನು ಕಟ್ಟಿ ಅಲ್ಲಿ ಅವನು ಯೆಹೋವನನ್ನು ಆರಾಧಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅಲ್ಲಿಂದ ಹೊರಟು ಬೇತೇಲಿನ ಪೂರ್ವದಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿ ಇಳಿದುಕೊಂಡನು. ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರುಗಳಿದ್ದವು. ಅಲ್ಲಿಯೂ ಅಬ್ರಾಮನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರಿನಲ್ಲಿ ಆರಾಧಿಸಿದನು.
Kannada BSI Bible 2016
ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅಲ್ಲಿಂದ ಹೊರಟು ಬೇತೇಲಿಗೆ ಮೂಡಲಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿಸಿ ಇಳುಕೊಂಡನು; ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರೂ ಇದ್ದವು. ಅಲ್ಲಿಯೂ ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.
Kannada Bible (KNCL) BSI 2016
ಬಳಿಕ ಅವನು ಅಲ್ಲಿಂದ ದಕ್ಷಿಣಕ್ಕೆ ಹೊರಟು ಬೇತೇಲಿಗೆ ಪೂರ್ವಕ್ಕಿರುವ ಗುಡ್ಡಗಾಡಿಗೆ ಬಂದು ಗುಡಾರ ಹಾಕಿ ನೆಲಸಿದನು. ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರು ಇದ್ದವು. ಅಲ್ಲೂ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಅವರ ನಾಮಸ್ಮರಣೆಮಾಡಿ ಆರಾಧಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿಂದ ಅವರು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ, ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರೂ ಇರುವ ಹಾಗೆ ತನ್ನ ಗುಡಾರವನ್ನು ಹಾಕಿಕೊಂಡನು. ಅಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಯೆಹೋವ ದೇವರ ಹೆಸರನ್ನು ಆರಾಧಿಸಿದನು.