Genesis 13:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬ್ರಾಮನು ಈಜಿಪ್ಟಿನಿಂದ ಹೊರಟನು. ಅಬ್ರಾಮನು ತನ್ನ ಹೆಂಡತಿಯನ್ನು ಕರೆದುಕೊಂಡು ತನ್ನವುಗಳನ್ನೆಲ್ಲಾ ತೆಗೆದುಕೊಂಡು ನೆಗೆವ್ ಮೂಲಕ ಪ್ರಯಾಣ ಮಾಡಿದನು. ಲೋಟನು ಸಹ ಅವರೊಡನೆ ಇದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಅಬ್ರಾಮನು ತನ್ನದನ್ನೆಲ್ಲಾ ತೆಗೆದುಕೊಂಡು ಹೆಂಡತಿಯನ್ನೂ, ಲೋಟನನ್ನೂ ಸಂಗಡ ಕರೆದುಕೊಂಡು ಐಗುಪ್ತದೇಶವನ್ನು ಬಿಟ್ಟು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯಕ್ಕೆ ಬಂದನು.
Kannada BSI Bible 2016
ಆಗ ಅಬ್ರಾಮನು ತನ್ನ ಹೆಂಡತಿಯೊಂದಿಗೆ ತನಗೆ ಇದ್ದದ್ದನ್ನೆಲ್ಲಾ ತಕ್ಕೊಂಡು ಲೋಟನ ಸಹಿತವಾಗಿ ಐಗುಪ್ತವನ್ನು ಬಿಟ್ಟು ದಕ್ಷಿಣಕ್ಕೆ ಏರಿಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಅಬ್ರಾಮನು ತನ್ನದನ್ನೆಲ್ಲಾ ತೆಗೆದುಕೊಂಡು ಹೆಂಡತಿಯನ್ನೂ ಲೋಟನನ್ನೂ ಸಂಗಡ ಕರಕೊಂಡು ಐಗುಪ್ತ ದೇಶವನ್ನು ಬಿಟ್ಟು ಕಾನಾನ್‍ದೇಶದ ದಕ್ಷಿಣ ಪ್ರಾಂತ್ಯಕ್ಕೆ ಏರಿ ಬಂದನು.
Kannada Bible (KNCL) BSI 2016
ಅಬ್ರಾಮನು ತನ್ನದುದನ್ನೆಲ್ಲಾ ತೆಗೆದುಕೊಂಡು ಹೆಂಡತಿ ಮತ್ತು ಲೋಟನ ಸಂಗಡ ಈಜಿಪ್ಟನ್ನು ಬಿಟ್ಟು ಕಾನಾನ್ ನಾಡಿನ ದಕ್ಷಿಣ ಪ್ರಾಂತ್ಯಕ್ಕೆ ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಬ್ರಾಮನು ತನ್ನ ಹೆಂಡತಿಯೊಂದಿಗೆ ತನಗೆ ಇದ್ದದ್ದನ್ನೆಲ್ಲಾ ತೆಗೆದುಕೊಂಡು ಲೋಟನ ಸಂಗಡ ಈಜಿಪ್ಟನ್ನು ಬಿಟ್ಟು ನೆಗೆವಕ್ಕೆ ಪ್ರಯಾಣಮಾಡಿದನು.