Genesis 13:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ರಾಮನು ಕಾನಾನ್ ಪ್ರದೇಶದಲ್ಲಿ ಉಳಿದುಕೊಂಡನು. ಲೋಟನು ಕಣಿವೆಯಲ್ಲಿದ್ದ ಪಟ್ಟಣಗಳ ಮಧ್ಯದಲ್ಲಿ ವಾಸಿಸಿದನು; ದಕ್ಷಿಣದಲ್ಲಿದ್ದ ಸೊದೋಮಿನವರೆಗೂ ಗುಡಾರಗಳನ್ನು ಹಾಕಿಕೊಂಡು ಪಾಳೆಯಮಾಡಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಅವರಿಬ್ಬರೂ ಪ್ರತ್ಯೇಕವಾದರು. ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನು ಯೊರ್ದನ್ ಹೊಳೆಯ ಸುತ್ತಣ ಊರುಗಳಲ್ಲಿ ವಾಸ ಮಾಡುತ್ತಾ ಸೊದೋಮಿನ ಸಮೀಪದಲ್ಲಿ ಗುಡಾರ ಹಾಕಿದನು.
Kannada BSI Bible 2016
ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನು ಸೊದೋಮಿನ ಬಳಿಯಲ್ಲಿ ಗುಡಾರಗಳನ್ನು ಹಾಕಿ ಕೊಂಡು ಮೈದಾನದ ಪಟ್ಟಣಗಳಲ್ಲಿ ವಾಸಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ರಾಮನು ಕಾನಾನ್‍ದೇಶದಲ್ಲಿ ವಾಸಮಾಡಿದನು; ಲೋಟನು ಯೊರ್ದನ್ ಹೊಳೆಯ ಸುತ್ತಣ ಊರುಗಳಲ್ಲಿ ಗುಡಾರ ಹಾಕಿಸಿ ವಸತಿ ಮಾಡುತ್ತಾ ಸೊದೋವಿುಗೆ ಬಂದನು.
Kannada Bible (KNCL) BSI 2016
ಅಬ್ರಾಮನು ಕಾನಾನ್ ನಾಡಿನಲ್ಲೇ ವಾಸಮಾಡಿದನು. ಲೋಟನು ಜೋರ್ಡನ್ ನದಿಯ ಸುತ್ತಣ ಊರುಗಳಲ್ಲಿ ವಾಸಮಾಡುತ್ತಾ ಸೋದೋಮ್‍ಗೆ ಸಮೀಪದಲ್ಲಿ ಗುಡಾರಹಾಕಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನಾದರೋ ಸಮತಟ್ಟಾದ ಊರುಗಳಲ್ಲಿ ವಾಸಿಸುತ್ತಾ ಸೊದೋಮಿನ ಬಳಿ ತನ್ನ ಗುಡಾರವನ್ನು ಹಾಕಿದನು.