Genesis 13:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲೋಟನು ಹೊರಟುಹೋದ ಮೇಲೆ ಯೆಹೋವನು ಅಬ್ರಾಮನಿಗೆ, “ಸುತ್ತಲೂ ನೋಡು, ಉತ್ತರದಕ್ಷಿಣಗಳ ಕಡೆಗೂ ಪೂರ್ವಪಶ್ಚಿಮಗಳ ಕಡೆಗೂ ನೋಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೋಟನು ಅಬ್ರಾಮನನ್ನು ಬಿಟ್ಟು ಬೇರೆಯಾದ ನಂತರ ಯೆಹೋವನು ಅಬ್ರಾಮನಿಗೆ, “ನೀನಿರುವ ಸ್ಥಳದಿಂದ ದಕ್ಷಿಣಕ್ಕೂ, ಉತ್ತರಕ್ಕೂ, ಪೂರ್ವಕ್ಕೂ, ಪಶ್ಚಿಮಕ್ಕೂ, ಕಣ್ಣೆತ್ತಿ ನೋಡು.
Kannada BSI Bible 2016
ಲೋಟನು ಅಬ್ರಾಮನಿಂದ ಅಗಲಿದ ಮೇಲೆ ಕರ್ತನು ಅವನಿಗೆ--ನಿನ್ನ ಕಣ್ಣುಗಳನ್ನು ಎತ್ತಿ ನೀನಿರುವ ಸ್ಥಳದಿಂದ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ನೋಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೋಟನು ಅಬ್ರಾಮನನ್ನು ಬಿಟ್ಟು ಬೇರೆಯಾದ ನಂತರ ಯೆಹೋವನು ಅಬ್ರಾಮನಿಗೆ - ನೀನಿರುವ ಸ್ಥಳದಿಂದ ದಕ್ಷಿಣೋತ್ತರಪೂರ್ವಪಶ್ಚಿಮಗಳಿಗೆ ಕಣ್ಣೆತ್ತಿ ನೋಡು.
Kannada Bible (KNCL) BSI 2016
ಲೋಟನು ಅಬ್ರಾಮನನ್ನು ಬಿಟ್ಟುಹೋದ ಬಳಿಕ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ, “ನೀನು ಇರುವ ಸ್ಥಳದಿಂದಲೇ ದಕ್ಷಿಣೋತ್ತರ ಪೂರ್ವಪಶ್ಚಿಮಗಳ ಕಡೆಗೆ ಕಣ್ಣೆತ್ತಿ ನೋಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೋಟನು ಅಬ್ರಾಮನಿಂದ ಹೋದ ಮೇಲೆ ಯೆಹೋವ ದೇವರು ಅವನಿಗೆ, “ಈಗ ನೀನಿರುವ ಸ್ಥಳದಿಂದ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ಕಣ್ಣೆತ್ತಿ ನೋಡು.