Genesis 13:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ರಾಮನ ಮಂದೆಕಾಯುವವರು ಮತ್ತು ಲೋಟನ ಮಂದೆಕಾಯುವವರು ವಾದ ಮಾಡಲಾರಂಭಿಸಿದರು. ಆ ಕಾಲದಲ್ಲಿ ಕಾನಾನ್ಯರು ಮತ್ತು ಪೆರಿಜೀಯರು ಸಹ ಆ ಸ್ಥಳದಲ್ಲಿ ವಾಸವಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಿಬ್ಬರ ಆಸ್ತಿ ಬಹಳವಾಗಿದ್ದುದರಿಂದ ಅವರು ಒಟ್ಟಿಗೆ ವಾಸವಾಗಿರುವುದು ಅಸಾಧ್ಯವಾಯಿತು. ಇದರಿಂದ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಗುತ್ತಿತ್ತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ವಾಸವಾಗಿದ್ದರು.
Kannada BSI Bible 2016
ಆಗ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದರಿಂದ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳ ಹುಟ್ಟಿತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ಇದ್ದರು.
Kannada Bible (KNCL) BSI 2016
ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳ ಬೇರೆ. ಇದೂ ಅಲ್ಲದೆ, ಆ ಕಾಲದಲ್ಲಿ ಕಾನಾನ್ಯರೂ ಪೆರಿಜೀಯರೂ ಅದೇ ನಾಡಿನಲ್ಲಿ ವಾಸವಾಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.