Genesis 13:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಅಬ್ರಾಮನು ಲೋಟನಿಗೆ, “ನಿನಗೂ ನನಗೂ ಯಾವ ವಾಗ್ವಾದವೂ ಇರಬಾರದು. ನಿನ್ನ ಜನರೂ ನನ್ನ ಜನರೂ ವಾಗ್ವಾದ ಮಾಡಬಾರದು; ನಾವೆಲ್ಲರೂ ಸಹೋದರರಾಗಿದ್ದೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಅಬ್ರಾಮನು ಲೋಟನಿಗೆ, “ನನಗೂ ನಿನಗೂ, ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಾಗಬಾರದು; ನಾವು ಸಹೋದರರಲ್ಲವೇ.
Kannada BSI Bible 2016
ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಅಬ್ರಾಮನು ಲೋಟನಿಗೆ - ನನಗೂ ನಿನಗೂ, ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರಲ್ಲವೇ.
Kannada Bible (KNCL) BSI 2016
ಆದುದರಿಂದ ಅಬ್ರಾಮನು ಲೋಟನಿಗೆ ಹೀಗೆಂದನು: “ನನಗೂ ನಿನಗೂ, ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು. ನಾವು ಬಳಗದವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ರಾಮನು ಲೋಟನಿಗೆ, “ನನಗೂ, ನಿನಗೂ; ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಿರಬಾರದು. ಏಕೆಂದರೆ ನಾವು ಬಳಗದವರು.