Genesis 13:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ಪ್ರತ್ಯೇಕವಾಗೋಣ. ನಿನಗೆ ಬೇಕಾದ ಸ್ಥಳವನ್ನು ನೀನು ಆರಿಸಿಕೊ. ನೀನು ಎಡಗಡೆಗೆ ಹೋಗುವುದಾದರೆ, ನಾನು ಬಲಗಡೆಗೆ ಹೋಗುತ್ತೇನೆ. ನೀನು ಬಲಗಡೆಗೆ ಹೋಗುವುದಾದರೆ, ನಾನು ಎಡಗಡೆಗೆ ಹೋಗುತ್ತೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇಶವೆಲ್ಲಾ ನಿನ್ನ ಎದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕವಾಗಿ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು” ಎಂದು ಹೇಳಿದನು.
Kannada BSI Bible 2016
ಭೂಮಿ ಯೆಲ್ಲಾ ನಿನ್ನ ಮುಂದೆ ಇರುತ್ತದಲ್ಲವೋ? ಹಾಗಾದರೆ ನನ್ನ ಬಳಿಯಿಂದ ಪ್ರತ್ಯೇಕವಾಗು; ನೀನು ಎಡಕ್ಕೆ ಹೋದರೆ ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ ನಾನು ಎಡಕ್ಕೆ ಹೋಗುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇಶವೆಲ್ಲಾ ನಿನ್ನೆದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು ಎಂದು ಹೇಳಿದನು.
Kannada Bible (KNCL) BSI 2016
ನಾಡೆಲ್ಲಾ ನಿನ್ನ ಕಣ್ಮುಂದಿದೆ. ದಯವಿಟ್ಟು ನನ್ನನ್ನು ಬಿಟ್ಟು ಬೇರೆ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುತ್ತೇನೆ. ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುತ್ತೇನೆ\.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇಶವೆಲ್ಲಾ ನಿನ್ನ ಮುಂದೆ ಇರುತ್ತದೆಯಲ್ಲವೆ? ನಾವು ಪ್ರತ್ಯೇಕವಾಗೋಣ. ನೀನು ಎಡಕ್ಕೆ ಹೋದರೆ, ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ, ನಾನು ಎಡಕ್ಕೆ ಹೋಗುವೆನು,” ಎಂದನು.