Genesis 14:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಿದ್ದೀಮ್ ಕಣಿವೆಯಲ್ಲಿ ಕಲ್ಲರಗಿನ ಕೆಸರುಕುಣಿಗಳು ಬಹಳಷ್ಟಿದ್ದವು. ಸೊದೋಮ್ ಮತ್ತು ಗೊಮೋರಗಳ ರಾಜರುಗಳು ಮತ್ತು ಅವರ ಸೈನ್ಯಗಳವರು ಓಡಿಹೋಗುವಾಗ ಈ ಕುಣಿಗಳಲ್ಲಿ ಬಿದ್ದುಹೋದರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಸಿದ್ದೀಮ್ ತಗ್ಗು ಪ್ರದೇಶ ಕಲ್ಲರಗಿನ ಕೆಸರುಗುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.
Kannada BSI Bible 2016
ಸಿದ್ದೀಮ್ ತಗ್ಗು ಜೇಡಿನ ಕುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ಅರಸರು ಓಡಿಹೋಗುವಾಗ ಅಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಸಿದ್ದೀಮ್ ತಗ್ಗಿನಲ್ಲಿ ಕಲ್ಲರಗಿನ ಕೆಸರುಕುಣಿಗಳು ತುಂಬಾ ಇದ್ದವು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಕುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.
Kannada Bible (KNCL) BSI 2016
ಆ ಸಿದ್ದೀಮ್ ತಗ್ಗಿನಲ್ಲಿ ಕಲ್ಲರಗಿನ ಕೆಸರುಗುಣಿಗಳು ಬಹಳವಿದ್ದವು. ಸೊದೋಮ್ ಗೊಮೋರದ ರಾಜರಕಡೆಯವರು ಹಿಮ್ಮೆಟ್ಟಿ ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು. ಉಳಿದವರು ಬೆಟ್ಟಗಳಿಗೆ ಓಡಿಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಿದ್ದೀಮ್ ತಗ್ಗು ಕಲ್ಲರಗಿನ ಕೆಸರುಕುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ಅರಸರು ಓಡಿಹೋಗಿ ಅದರಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು.