Genesis 14:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗೆದ್ದವರು ಸೊದೋಮ್ ಮತ್ತು ಗೊಮೋರಗಳ ಜನರು ಹೊಂದಿದ್ದ ಎಲ್ಲಾ ವಸ್ತುಗಳನ್ನು ತೆಗೆದುಕೊಂಡರು. ಅವರು ಅವರೆಲ್ಲರ ಆಹಾರವನ್ನೂ ಬಟ್ಟೆಗಳನ್ನೂ ತೆಗೆದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೆದ್ದ ಆ ನಾಲ್ಕು ಅರಸರು ಸೊದೋಮ್ ಗೊಮೋರ ಪಟ್ಟಣಗಳನ್ನು ಸೂರೆಮಾಡಿ ಅವುಗಳಲ್ಲಿದ್ದ ಎಲ್ಲಾ ಸಂಪತ್ತನ್ನೂ ದವಸವನ್ನೂ ತೆಗೆದುಕೊಂಡು ಹೋದರು.
Kannada BSI Bible 2016
ಆಗ ಅವರು ಸೊದೋಮ್ ಗೊಮೋರಗಳ ಎಲ್ಲಾ ಸಂಪತ್ತನ್ನೂ ಅವರ ಎಲ್ಲಾ ಆಹಾರ ಪದಾರ್ಥ ವನ್ನೂ ತೆಗೆದುಕೊಂಡು ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗೆದ್ದವರು ಸೊದೋಮ್ ಗೊಮೋರ ಪಟ್ಟಣಗಳನ್ನು ಸೂರೆಮಾಡಿ ಅವುಗಳಲ್ಲಿದ್ದ ಎಲ್ಲಾ ಆಸ್ತಿಯನ್ನೂ ದವಸವನ್ನೂ ತೆಗೆದುಕೊಂಡು ಹೋದರು.
Kannada Bible (KNCL) BSI 2016
ಗೆದ್ದ ಆ ನಾಲ್ಕು ರಾಜರು ಸೊದೋಮ್ ಮತ್ತು ಗೊಮೋರ ಪಟ್ಟಣಗಳನ್ನು ಸೂರೆಮಾಡಿದರು. ಅವುಗಳಲ್ಲಿದ್ದ ಆಸ್ತಿಪಾಸ್ತಿಯನ್ನೂ ದವಸಧಾನ್ಯಗಳನ್ನೂ ದೋಚಿಕೊಂಡು ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಸೊದೋಮ್, ಗೊಮೋರಗಳ ಎಲ್ಲಾ ಸಂಪತ್ತನ್ನೂ, ಅವರ ಎಲ್ಲಾ ಆಹಾರ ಪದಾರ್ಥಗಳನ್ನೂ ತೆಗೆದುಕೊಂಡು ಹೊರಟು ಹೋದರು.