Genesis 14:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಪ್ಪಿಸಿಕೊಂಡ ಒಬ್ಬನು ಇಬ್ರಿಯನಾದ ಅಬ್ರಾಮನ ಬಳಿಗೆ ಹೋಗಿ ನಡೆದ ವಿಷಯವನ್ನೆಲ್ಲಾ ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆ, ಎಷ್ಕೋಲ ಮತ್ತು ಆನೇರ್ ಒಬ್ಬರಿಗೊಬ್ಬರು ಸಹಾಯಮಾಡಲು ಒಂದು ಒಪ್ಪಂದವನ್ನು ಮಾಡಿಕೊಂಡಿದ್ದರು. ಅಲ್ಲದೆ ಅಬ್ರಾಮನಿಗೂ ಸಹಾಯಮಾಡುವುದಾಗಿ ಒಂದು ಒಪ್ಪಂದಕ್ಕೆ ಸಹಿ ಮಾಡಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಪ್ಪಿಸಿಕೊಂಡವನೊಬ್ಬನು, ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ಮೋರೆ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.
Kannada BSI Bible 2016
ತಪ್ಪಿಸಿಕೊಂಡವನೊಬ್ಬನು ಹೋಗಿ ಇಬ್ರಿಯ ನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಇವನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದು ಅಮೋರಿಯನಾದ ಮಮ್ರೆಯ ಮೈದಾನದಲ್ಲಿ ವಾಸ ವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಪ್ಪಿಸಿಕೊಂಡವನೊಬ್ಬನು ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಇದನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನು ಎಷ್ಕೋಲ ಆನೇರರಿಗೆ ಸಹೋದರನು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.
Kannada Bible (KNCL) BSI 2016
ತಪ್ಪಿಸಿಕೊಂಡು ಓಡಿಹೋದವರಲ್ಲಿ ಒಬ್ಬ ವ್ಯಕ್ತಿ ಹಿಬ್ರಿಯನಾದ ಅಬ್ರಾಮನ ಬಳಿಗೆ ಬಂದು ನಡೆದುದನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು. ಇವರಿಗೂ ಅಬ್ರಾಮನಿಗೂ ಒಪ್ಪಂದವಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಪ್ಪಿಸಿಕೊಂಡವನೊಬ್ಬನು ಹೋಗಿ ಹಿಬ್ರಿಯನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಆಗ ಅಬ್ರಾಮನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದ ಅಮೋರಿಯನಾದ ಮಮ್ರೆಯನ ತೋಪಿನಲ್ಲಿ ವಾಸವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.