Genesis 14:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ಶತ್ರುಗಳು ಅಪಹರಿಸಿದ್ದ ಎಲ್ಲಾ ವಸ್ತುಗಳನ್ನು ಮತ್ತು ಲೋಟನ ಆಸ್ತಿಯನ್ನು ಅಬ್ರಾಮನು ತೆಗೆದುಕೊಂಡು ಲೋಟನೊಡನೆ ಬಂದನು. ಅಲ್ಲದೆ ಸೆರೆಹಿಡಿಯಲ್ಪಟ್ಟಿದ್ದ ಸ್ತ್ರೀಯರನ್ನು ಮತ್ತು ಇತರ ಜನರನ್ನು ಹಿಂದಕ್ಕೆ ಕರೆದುಕೊಂಡು ಬಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾಜರು ಅಪಹರಿಸಿದ್ದ ಎಲ್ಲಾ ವಸ್ತುಗಳನ್ನು ಅವನು ತಿರುಗಿ ಪಡೆದುಕೊಂಡನು. ತನ್ನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿಯನ್ನೂ ಬಿಡಿಸಿಕೊಂಡದ್ದಲ್ಲದೆ, ಸೆರೆಯಲ್ಲಿದ್ದ ಸ್ತ್ರೀಯರನ್ನೂ, ಉಳಿದಿದ್ದ ಜನರನ್ನು ಕರೆದುಕೊಂಡು ಬಂದನು.
Kannada BSI Bible 2016
ಸಂಪತ್ತನ್ನೆಲ್ಲಾ ಹಿಂದಕ್ಕೆ ತೆಗೆದುಕೊಂಡು ಬಂದನು. ತನ್ನ ಸಹೋದರನಾದ ಲೋಟನನ್ನೂ ಅವನ ಸಂಪತ್ತನ್ನೂ ಸ್ತ್ರೀಯರನ್ನೂ ಜನರನ್ನೂ ಹಿಂದಕ್ಕೆ ತಕ್ಕೊಂಡು ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾಜರು ಅಪಹರಿಸಿದ್ದ ಎಲ್ಲಾ ವಸ್ತುಗಳನ್ನು ಅವನು ತೆಗೆದುಕೊಂಡನು. ತನ್ನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿಯನ್ನೂ ಬಿಡಿಸಿಕೊಂಡದ್ದಲ್ಲದೆ ಸೆರೆಯಲ್ಲಿದ್ದ ಸ್ತ್ರೀಯರನ್ನೂ ವಿುಕ್ಕಾದವರನ್ನೂ ತೆಗೆದುಕೊಂಡು ಬಂದನು.
Kannada Bible (KNCL) BSI 2016
ಆ ರಾಜರು ಅಪಹರಿಸಿದ್ದ ಎಲ್ಲ ವಸ್ತುಗಳನ್ನು ಕಿತ್ತುಕೊಂಡನು. ತನ್ನ ತಮ್ಮನ ಮಗನಾದ ಲೋಟನನ್ನು ಬಿಡುಗಡೆಮಾಡಿದನು; ಅವನ ಆಸ್ತಿಪಾಸ್ತಿಯನ್ನು, ಸೆರೆಯಲ್ಲಿದ್ದ ಮಹಿಳೆಯರನ್ನು ಮತ್ತು ಇತರರನ್ನು ಬಿಡಿಸಿಕೊಂಡು ಹಿಂದಿರುಗಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಸ್ತಿಯನ್ನೆಲ್ಲಾ ಹಿಂದಕ್ಕೆ ತೆಗೆದುಕೊಂಡು ಬಂದನು. ತನ್ನ ಬಂಧುವಾದ ಲೋಟನನ್ನೂ, ಅವನ ಸಂಪತ್ತನ್ನೂ ಸ್ತ್ರೀಯರನ್ನೂ ಜನರನ್ನೂ ಹಿಂದಕ್ಕೆ ತೆಗೆದುಕೊಂಡು ಬಂದನು.