Genesis 14:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬ್ರಾಮನು ಕೆದೊರ್ಲಗೋಮರನನ್ನೂ ಮತ್ತು ಅವನೊಡನಿದ್ದ ರಾಜರುಗಳನ್ನೂ ಸೋಲಿಸಿದ ಮೇಲೆ ತನ್ನ ಮನೆಗೆ ಹಿಂತಿರುಗಿದನು. ಆಗ ಸೊದೋಮಿನ ರಾಜನು ಅಬ್ರಾಮನನ್ನು ಭೇಟಿಯಾಗಲು ಶಾವೆ ಕಣಿವೆಗೆ ಹೋದನು. (ಈಗ ಇದಕ್ಕೆ ‘ರಾಜನ ಕಣಿವೆ’ ಎಂದು ಕರೆಯುತ್ತಾರೆ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಕೆದೊರ್ಲಗೋಮರನ್ನೂ ಅವನೊಂದಿಗೆ ಇದ್ದ ರಾಜರನ್ನೂ ಸೋಲಿಸಿ ಬಂದ ಮೇಲೆ ಸೊದೋಮಿನ ಅರಸನು ಅವನನ್ನು ಅರಸನ ತಗ್ಗು ಎನ್ನಿಸಿಕೊಳ್ಳುವ ಶಾವೆ ತಗ್ಗಿನಲ್ಲಿ ಅಬ್ರಾಮನನ್ನು ಎದುರುಗೊಂಡನು.
Kannada BSI Bible 2016
ಅವನು ಕೆದೊರ್ಲಗೋಮರನನ್ನು ಅವನ ಸಂಗಡ ಇದ್ದ ಅರಸರನ್ನು ಸಂಹರಿಸಿ ಹಿಂತಿರುಗಿ ಬಂದ ಮೇಲೆ ಸೊದೋಮಿನ ಅರಸನು ಹೊರಟು ಶಾವೆ ಎಂಬ ಅರಸನ ತಗ್ಗಿನ ವರೆಗೆ ಅಬ್ರಾಮನನ್ನು ಎದುರುಗೊಳ್ಳುವದಕ್ಕಾಗಿ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಕೆದೊರ್ಲಗೋಮರನನ್ನೂ ಅವನೊಂದಿಗೆ ಇದ್ದ ರಾಜರನ್ನೂ ಹೊಡೆದು ಬಂದಮೇಲೆ ಸೊದೋವಿುನ ಅರಸನು ಅವನನ್ನು ಅರಸನ ತಗ್ಗು ಎನ್ನಿಸಿಕೊಳ್ಳುವ ಶಾವೆ ತಗ್ಗಿನಲ್ಲಿ ಎದುರುಗೊಂಡನು.
Kannada Bible (KNCL) BSI 2016
ಅಬ್ರಾಮನು ಕೆದೊರ್ಲಗೋಮರನನ್ನೂ ಅವನೊಂದಿಗಿದ್ದ ರಾಜರನ್ನೂ ಸೋಲಿಸಿ ಬಂದಾಗ ಸೊದೋಮಿನ ಅರಸನು ಅವನನ್ನು ಶಾವೆ ತಗ್ಗಿನಲ್ಲಿ (ಅದಕ್ಕೆ ಅರಸನ ತಗ್ಗು ಎಂಬ ಹೆಸರೂ ಉಂಟು) ಭೇಟಿಯಾಗಲು ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಕೆದೊರ್ಲಗೋಮರನನ್ನೂ, ಅವನ ಸಂಗಡ ಇದ್ದ ರಾಜರನ್ನೂ ಸೋಲಿಸಿ, ಹಿಂದಿರುಗಿ ಬಂದಾಗ, ಸೊದೋಮಿನ ಅರಸನು ಹೊರಟು ಶಾವೆ ತಗ್ಗು ಎಂಬ ಅರಸನ ತಗ್ಗಿನಲ್ಲಿ ಅಬ್ರಾಮನನ್ನು ಎದುರುಗೊಳ್ಳುವುದಕ್ಕಾಗಿ ಬಂದನು.